ರಾಜೀವ್ ಗಾಂಧಿ ಹತ್ಯೆ ಪ್ರಕರಣ: ಅಪರಾಧಿಗಳ ಬಿಡುಗಡೆ ಸಂಬಂಧ ಕೇಂದ್ರದ ನಿಲುವು ಕೇಳಿದ ಸುಪ್ರೀಂ ಕೋರ್ಟ್
ರಾಜೀವ್ ಗಾಂಧಿ ಹತ್ಯೆ ಪ್ರಕರಣ ಸಂಬಂಧ ಏಳು ಅಪರಾಧಿಗಳ ಜೈಲು ಶಿಕ್ಷೆಯನ್ನು ರದ್ದುಗೊಳಿಸುವ ತಮಿಳು ನಾಡು ಸರ್ಕಾರದ ಪ್ರಸ್ತಾಪದ ಬಗೆಗೆ........

Published On :
ನವದೆಹಲಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣ ಸಂಬಂಧ ಏಳು ಅಪರಾಧಿಗಳ ಜೈಲು ಶಿಕ್ಷೆಯನ್ನು ರದ್ದುಗೊಳಿಸುವ ತಮಿಳು ನಾಡು ಸರ್ಕಾರದ ಪ್ರಸ್ತಾಪದ ಬಗೆಗೆ ಕೇಂದ್ರ ತನ್ನ ನಿಲುವನ್ನು ಸ್ಪಷ್ಟಪಡಿಸಲಿ ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ.
ಕೇಂದ್ರವು "ತಾನೇನು ಬಯಸುತ್ತಿದ್ದೇನೆ" ಎಂದು ಇನ್ನು ಮೂರು ತಿಂಗಳೊಳಗೆ ತಿಳಿಸಬೇಕೆಂದು ಕೋರ್ಟ್ ಆದೇಶಿಸಿದೆ.
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಪೆರರಿವಾಲನ್, ಮುರುಗನ್, ಸಂತನ್, ನಳಿನಿ, ರಾಬರ್ಟ್ ಪಿಯೂಶ್, ಜಯಕುಮಾರ್ ಮತ್ತು ರವಿಚಂದ್ರನ್ ಅವರುಗಳು ಕಳೆದ 24 ವರ್ಷಗಳಿಂದ ಜೈಲಿನಲ್ಲಿದ್ದಾರೆ. ಕಳೆದ ಎರಡು ವರ್ಷಗಳ ಹಿಂದೆ ತಮಿಳುನಾಡು ಸರ್ಕಾರ ಇವರನ್ನು ಬಿಡುಗಡೆ ಗೊಳಿಸುವ ಉದ್ದೇಶದಿಂಡ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂ ಕೋರ್ಟ್ತಮಿಳುನಾಡು ಸರ್ಕಾರTamil Nadu governmentRajiv Gandhi assassinationರಾಜೀವ್ ಗಾಂಧಿ ಹತ್ಯೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


