ದೇಶ

2019 ಲೋಕಸಭೆ ಚುನಾವಣೆ: ಏಕಾಂಗಿಯಾಗಿ ಸ್ಪರ್ಧಿಸಲು ಶಿವಸೇನೆ ನಿರ್ಣಯ

ಮುಂಬರುವ ಲೋಕಸಭಾ ಚುನಾವಣೆ ಮತ್ತು 2019ರ ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟದಿಂದ ಹೊರಗುಳಿದು ಏಕಾಂಗಿಯಾಗಿ ಸ್ಪರ್ಧೆ ಮಾಡುವ ಕುರಿತು ಶಿವಸೇನೆ ಪಕ್ಷ ಮಂಗಳವಾರ ನಿರ್ಣಯ ಕೈಗೊಂಡಿದೆ.

2019 ಲೋಕಸಭೆ ಚುನಾವಣೆ: ಏಕಾಂಗಿಯಾಗಿ ಸ್ಪರ್ಧಿಸಲು ಶಿವಸೇನೆ ನಿರ್ಣಯ
ಸಂಗ್ರಹ ಚಿತ್ರ
Published On :
ಮುಂಬೈ: ಮುಂಬರುವ ಲೋಕಸಭಾ ಚುನಾವಣೆ ಮತ್ತು 2019ರ ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟದಿಂದ ಹೊರಗುಳಿದು ಏಕಾಂಗಿಯಾಗಿ ಸ್ಪರ್ಧೆ ಮಾಡುವ ಕುರಿತು ಶಿವಸೇನೆ ಪಕ್ಷ ಮಂಗಳವಾರ  ನಿರ್ಣಯ ಕೈಗೊಂಡಿದೆ.
ಮಂಗಳವಾರ ನಡೆದ ಪಕ್ಷದ ಸಭೆಯಲ್ಲಿ ಈ ಬಗ್ಗೆ ಅವಿರೋಧ ನಿರ್ಣಯ ಕೈಗೊಳ್ಳಲಾಗಿದ್ದು, ಸಭೆ ಬಳಿಕ ಮಾಧ್ಯಮಗಳೊಂದಿಗೆ ಈ ಬಗ್ಗೆ ಮಾತನಾಡಿದ ಪಕ್ಷದ ವಕ್ತಾರ ಸಂಜಯ್ ರಾವತ್ ಅವರು, 2019ರ ಲೋಕಸಭೆ ಮತ್ತು  ವಿಧಾನಸಭೆ ಚುನಾವಣೆವನ್ನು ನಾವು ಏಕಾಂಗಿಯಾಗಿ ಎದುರಿಸಲು ನಿರ್ಧರಿಸಿದ್ದೇವೆ ಎಂದು ಮಾಹಿತಿ ನೀಡಿದರು. ಅಲ್ಲದೆ ಇದೇ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿದ ಅವರು ಕಳೆದ ಮೂರು ವರ್ಷಗಳಿಂದ ಬಿಜೆಪಿ ಪಕ್ಷ ಸಿದ್ಧಾಂತಗಳ  ವಿರುದ್ಧವಾಗಿ ನಡೆಯುತ್ತಿದೆ. ಹೀಗಾಗಿ ಪಕ್ಷ ಏಕಾಂಗಿ ಸ್ಪರ್ಧಿಸಲು ನಿರ್ಧರಿಸಿದೆ ಎಂದು ಅವರು ಹೇಳಿದರು.
ಇದೇ ವೇಳೆ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಪಕ್ಷ ಉತ್ತಮ ಸಾಧನೆ ಮಾಡುವ ವಿಶ್ವಾಸವಿದ್ದು, 48 ಲೋಕಸಭಾ ಕ್ಷೇತ್ರಗಳಲ್ಲಿ ಶಿವಸೇನೆ ಕನಿಷ್ಟ 25 ಸ್ಥಾನಗಳನ್ನು ಗೆಲ್ಲಲಿದೆ. ಅಂತೆಯೇ 288 ವಿಧಾನಸಭಾ ಕ್ಷೇತ್ರಗಳ  ಪೈಕಿ 125 ಸ್ಥಾನಗಳನ್ನು ಜಯಿಸಿ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು. ಅಂತೆಯೇ ಪಕ್ಷದ ಆಂತರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಹೊರತುಪಡಿಸಿ ಸ್ವತಂತ್ರವಾಗಿ ಚುನಾವಣೆ ಎದುರಿಸಲು ನಿರ್ಧರಿಸುವ ಕುರಿತು ಪಕ್ಷದ  ನಾಯಕರು ನಿರ್ಧರಿಸಿದ್ದಾರೆ ಎಂದು ರಾವತ್ ಹೇಳಿದ್ದರು.
ನಿನ್ನೆಯಷ್ಟೇ ಮುಂಬೈನ ಬಾಂದ್ರಾದಲ್ಲಿರುವ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ನಿವಾಸ ಮಾತೋಶ್ರೀಯಲ್ಲಿ ಪಕ್ಷದ ಸಭೆ ನಡೆಸಲಾಗಿತ್ತು. ಇನ್ನು ಈ ಹಿಂದೆ 2014ರ ಲೋಕಸಭಾ ಚುನಾವಣೆಯನ್ನು ಜಂಟಿಯಾಗಿ ಎದುರಿಸಿದ್ದ  ಶಿವಸೇನೆ ಮತ್ತು ಬಿಜೆಪಿ ಬಳಿಕ ಉಂಟಾದ ರಾಜಕೀಯ ಬಿಕ್ಕಟ್ಟಿನಿಂದಾಗಿ ಪರಸ್ಪರ ಅಸಮಾಧಾನ ಹೊಂದಿದ್ದವು. ಪ್ರಮುಖವಾಗಿ ಸೀಟುಗಳ ಹಂಚಿಕೆ ಮತ್ತು ಪ್ರಮುಖ ಖಾತೆಗಳ ಹಂಚಿಕೆ ಸಂಬಂಧ ಶಿವಸೇನೆ ಅಸಮಾಧಾನ  ಹೊಂದಿತ್ತು. ಇದೇ ಕಾರಣಕ್ಕೆ ಬಳಿಕ ನಡೆದ ಬಿಎಂಸಿ ಚುನಾವಣೆಯಲ್ಲೂ ಶಿವಸೇನೆ ಮತ್ತು ಬಿಜೆಪಿ ಬೇರೆ ಬೇರೆಯಾಗಿ ಸ್ಪರ್ಧಿಸಿದ್ದವು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.