ಆಪ್ ಶಾಸಕರ ಅನರ್ಹತೆ: ಮಧ್ಯಂತರ ಆದೇಶ ನೀಡಲು ಹೈಕೋರ್ಟ್ ನಕಾರ
ಲಾಭದಾಯಕ ಹುದ್ದೆ ಹೊಂದಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ 20 ಶಾಸಕರನ್ನು ಅನರ್ಹಗೊಳಿಸಿರುವ ಕೇಂದ್ರದ ಅಧಿಸೂಚನೆಗೆ ತಡೆ ನೀಡಲು ದೆಹಲಿ....

Published On :
ನವದೆಹಲಿ: ಲಾಭದಾಯಕ ಹುದ್ದೆ ಹೊಂದಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ 20 ಶಾಸಕರನ್ನು ಅನರ್ಹಗೊಳಿಸಿರುವ ಕೇಂದ್ರದ ಅಧಿಸೂಚನೆಗೆ ತಡೆ ನೀಡಲು ದೆಹಲಿ ಹೈಕೋರ್ಟ್ ಬುಧವಾರ ನಿರಾಕರಿಸಿದೆ. ಆದರೆ ಜನವರಿ 29ರೊಳಗೆ ಉಪ ಚುನಾವಣೆ ದಿನಾಂಕ ಘೋಷಣೆಯಂತಹ ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳದಂತೆ ಚುನಾವಣಾ ಆಯೋಗಕ್ಕೆ ಸೂಚಿಸಿದೆ.
ಅನರ್ಹತೆ ಪ್ರಶ್ನಿಸಿ ಆಪ್ ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಭು ಭಖ್ರು ಅವರು, ಈ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದ್ದಾರೆ.
20 ಎಎಪಿ ಶಾಸಕರ ಅನರ್ಹತೆಗೆ ಸಂಬಂಧಿಸಿದಂತೆ ನೆಡದ ವಿಚಾರಣೆಯ ಸಂಪೂರ್ಣ ದಾಖಲೆಗಳನ್ನು ಒದಗಿಸುವಂತೆ ಹೈಕೋರ್ಟ್ ಆಯೋಗಕ್ಕೆ ಸೂಚಿಸಿದೆ.
ಚುನಾವಣಾ ಆಯೋಗ ಆಮ್ ಆದ್ಮಿ ಪಕ್ಷದ 20 ಶಾಸಕರು ಸಂಸದೀಯ ಕಾರ್ಯದರ್ಶಿಯಾಗಿ ನೇಮಕಗೊಳ್ಳುವ ಮೂಲಕ ಲಾಭದಾಯಕ ಹುದ್ದೆ ಹೊಂದಿದ್ದು, ಅವರನ್ನು ಅನರ್ಹಗೊಳಿಸುವಂತೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿತ್ತು. ಅದಕ್ಕೆ ರಾಷ್ಟ್ರಪತಿ ರಾಮನಾತ್ ಕೊವಿಂದ್ ಅವರು ಜನವರಿ 20ರಂದು ಸಹಿ ಹಾಕಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Delhi High Courtದೆಹಲಿ ಹೈಕೋರ್ಟ್Election Commissionಚುನಾವಣಾ ಆಯೋಗCentreಕೇಂದ್ರdisqualifying AAP MLAsಆಪ್ ಶಾಸಕರ ಅನರ್ಹತೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


