ಕದನ ವಿರಾಮ ಉಲ್ಲಂಘನೆ: ಪಾಕ್ ದಾಳಿಗೆ ಗಾಯಗೊಂಡಿದ್ದ ಯೋಧ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ನಡೆಸಿದ್ದ ಕದನ ವಿರಾಮ ಉಲ್ಲಂಘನೆ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಭಾರತೀಯ ಯೋಧ ಬುಧವಾರ ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ...

Published On :
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ನಡೆಸಿದ್ದ ಕದನ ವಿರಾಮ ಉಲ್ಲಂಘನೆ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಭಾರತೀಯ ಯೋಧ ಬುಧವಾರ ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ.
ಜನವರಿ 20 ರಂದು ಜಮ್ಮು ಮತ್ತು ಕಾಶ್ಮೀರದ ಕೃಷ್ಣಘಾಟಿ ಸೆಕ್ಟರ್ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿತ್ತು. ಈ ವೇಳೆ ಭಾರತೀಯ ಯೋಧರನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು.
ಪಾಕಿಸ್ತಾನದ ಅಪ್ರಚೋದಿತ ಗುಂಡು ಹಾಗೂ ಶೆಲ್ ದಾಳಿಗೆ ಯೋಧ ನಾಯ್ಕ್ ಜಗದೀಶ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಜಗದೀಶ್ ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಹುತಾತ್ಮರಾಗಿದ್ದಾರೆಂದು ವರದಿಗಳು ತಿಳಿಸಿವೆ.
ಜಗದೀಶ್ ಅವರು ಛಮೋಲಿ ಜಿಲ್ಲೆಯ ನಿವಾಸಿಯಾಗಿದ್ದು, ಪತ್ನಿ ಉಷಾ ದೇವಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Pakistanಪಾಕಿಸ್ತಾನಜಮ್ಮು ಮತ್ತು ಕಾಶ್ಮೀರCeasefire ViolationJammu and Kashmirಕದನ ವಿರಾಮ ಉಲ್ಲಂಘನೆmartyrಹುತಾತ್ಮಯೋಧsoldier
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


