ಅಹ್ಮದಾಬಾದ್ ಮಾಲ್'ನಲ್ಲಿ ದಾಂಧಲೆ ಪ್ರಕರಣ: 16 ಮಂದಿ ಬಂಧನ
ಪದ್ಮಾವತ್ ಚಿತ್ರ ವಿವಾದಕ್ಕೆ ಸಂಬಂಧಿಸಿದಂತೆ ಅಹ್ಮದಾಬಾದ್ ಮಾಲ್ ನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗೆ ಸಂಬಂಧಿಸಿದಂತೆ ಪೊಲೀಸರು 16 ಮಂದಿಯನ್ನು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ...

Published On :
ಅಹ್ಮದಾಬಾದ್: ಪದ್ಮಾವತ್ ಚಿತ್ರ ವಿವಾದಕ್ಕೆ ಸಂಬಂಧಿಸಿದಂತೆ ಅಹ್ಮದಾಬಾದ್ ಮಾಲ್ ನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗೆ ಸಂಬಂಧಿಸಿದಂತೆ ಪೊಲೀಸರು 16 ಮಂದಿಯನ್ನು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ.
ಪದ್ಮಾವತ್ ಚಿತ್ರ ಬಿಡುಗಡೆಗೆ ದಿನಾಂಕ ನಿಗದಿಯಾದ ಹಿನ್ನಲೆಯಲ್ಲಿ ಚಿತ್ರಕ್ಕೆ ಬಿಡುಗಡೆಗೆ ತೀವ್ರ ವ್ಯಕ್ತಪಡಿಸಿದ್ದ ಕಿಡಿಗೇಡಿಗಳ ಗುಂಪೊಂದು ಕಳೆದ ರಾತ್ರಿ ಅಹ್ಮದಾಬಾದ್ ನಲ್ಲಿರುವ ಮಾಲ್ ಗೆ ನುಗ್ಗಿ ದಾಂಧಲೆ ನಡೆಸಿತ್ತು. ಇದರ ಪರಿಣಾಮ ಸ್ಥಳದಲ್ಲಿ ಹಿಂಸಾತ್ಮಕ ವಾತಾವರಣ ನಿರ್ಮಾಣವಾಗಿತ್ತು.
ಅಹ್ಮದಾಬಾದ್'ನ ಅಕ್ರೋಪೋಲಿಸ್, ಅಹ್ಮದಾಬಾದ್ ವನ್, ಹಿಮಾಲಯ ಮಾಲ್ ಹಾಗೂ ಸಿನಿಮೆಕ್ಸ್ ಸಂಕೀರ್ಣಗಳ ಮೇಲೆ ಕಿಡಿಗೇಡಿಗಳ ಗುಂಪು ದಾಳಿ ನಡೆಸಿದ್ದರು. ಮಾಲ್ ನಲ್ಲಿ ಕಿಡಿಗೇಡಿಗಳು ನಡೆಸಿದ್ದ ದಾಂಧಲೆಗೆ ಸ್ಥಳದಲ್ಲಿ 150ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿದ್ದವು. ಅಲ್ಲದೆ, ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದ ಪೊಲೀಸರು 16 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಪ್ರಸ್ತುತ ಬಂಧಿತರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆಂದು ತಿಳಿದುಬಂದಿದೆ.
ಅಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದು, ಮತ್ತಷ್ಟು ಜನರನ್ನು ಬಂಧನಕ್ಕೊಳಪಡಿಸುವ ಸಾಧ್ಯತೆಗಳಿವೆ ಎಂದು ಹಿರಿಯ ಅಧಿಕಾರಿ ಹೇಳಿದ್ದಾರೆ.
ಜನತೆ ಬಳಿ ಮನವಿ ಮಾಡಿಕೊಂಡಿರುವ ಅಧಿಕಾರಿಗಳು, ಜನರು ತಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ಕಾನೂನು ಮತ್ತು ಸುವ್ಯವಸ್ಥೆಯನ್ನು ಯಾರೂ ಕೈಗೆತ್ತಿಕೊಳ್ಳಬಾರದು ಎಂದು ಹೇಳಿದ್ದಾರೆ.
ಚಿತ್ರ ಬಿಡುಗಡೆಯಾಗುವ ಎಲ್ಲಾ ಚಿತ್ರಮಂದಿರಗಳಿಗೂ ಸೂಕ್ತ ರೀತಿ ಭದ್ರತೆಯನ್ನು ನೀಡಲಾಗಿದೆ. ಪದ್ಮಾವತ್ ಚಿತ್ರಕ್ಕೆ ಸುಪ್ರೀಂಕೋರ್ಟ್ ಅನುಮತಿ ನೀಡಿದ್ದು, ನ್ಯಾಯಾಲಯವೇ ಅನುಮತಿ ನೀಡಿದ ಮೇಲೆ ಚಿತ್ರ ಮಂದಿರಗಳಿಗೆ ಭದ್ರತೆಯೊದಗಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


