ಮೇವು ಹಗರಣದ ತೀರ್ಪು: ಬಿಜೆಪಿ, ನಿತೀಶ್ ಕುತಂತ್ರ, ತೀರ್ಪು ಪ್ರಶ್ನಿಸಿ ಶೀಘ್ರ ಅರ್ಜಿ: ತೇಜಸ್ವಿ ಯಾದವ್
ಮೇವು ಹಗರಣದ 3ನೇ ಪ್ರಕರಣದ ತೀರ್ಪಿನಲ್ಲಿ ಬಿಜೆಪಿ ಮತ್ತು ಬಿಹಾರ ಸಿಎಂ ನಿತೀಶ್ ಕುಮಾರ್ ಅವರ ಕುತಂತ್ರ ಅಡಗಿದ್ದು, ತೀರ್ಪು ಪ್ರಶ್ನಿಸಿ ಶೀಘ್ರ ಮೇಲಿನ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವುದಾಗಿ ಲಾಲು ಪ್ರಸಾದ್ ಯಾದವ್ ಪುತ್ರ ತೇಜಸ್ವಿ ಯಾದವ್ ಹೇಳಿದ್ದಾರೆ.

Published On :
ರಾಂಚಿ: ಮೇವು ಹಗರಣದ 3ನೇ ಪ್ರಕರಣದ ತೀರ್ಪಿನಲ್ಲಿ ಬಿಜೆಪಿ ಮತ್ತು ಬಿಹಾರ ಸಿಎಂ ನಿತೀಶ್ ಕುಮಾರ್ ಅವರ ಕುತಂತ್ರ ಅಡಗಿದ್ದು, ತೀರ್ಪು ಪ್ರಶ್ನಿಸಿ ಶೀಘ್ರ ಮೇಲಿನ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವುದಾಗಿ ಲಾಲು ಪ್ರಸಾದ್ ಯಾದವ್ ಪುತ್ರ ತೇಜಸ್ವಿ ಯಾದವ್ ಹೇಳಿದ್ದಾರೆ.
ಅತ್ತ ರಾಂಚಿ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ಹೊರ ಬೀಳುತ್ತಿದ್ದಂತೆಯೇ ಇತ್ತ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ತೇಜಸ್ವಿ ಯಾದವ್, ತೀರ್ಪಿನಿಂದ ತಮಗೇನೂ ಅಚ್ಚರಿಯಾಗಿಲ್ಲ. ತೀರ್ಪಿನಲ್ಲಿ ಬಿಜೆಪಿ ಮತ್ತು ಬಿಹಾರ ಸಿಎಂ ನಿತೀಶ್ ಕುಮಾರ್ ಅವರ ಕುತಂತ್ರ ಅಡಗಿದ್ದು, ನಿತೀಶ್ ಬಿಜೆಪಿ ಪಕ್ಷದ ಕೈಗೊಂಬೆಯಾಗಿದ್ದಾರೆ. ಅಂತೆಯೇ ಲಾಲು ಪ್ರಸಾದ್ ಅವರ ವಿರುದ್ಧ ಬಿಜೆಪಿ, ಆರ್‌ಎಸ್‌ಎಸ್ ಹಾಗೂ ಮುಖ್ಯವಾಗಿ ನಿತೀಶ್ ಕುಮಾರ್ ಹೂಡಿರುವ ಪಿತೂರಿ ಜನರಿಗೆ ತಿಳಿದಿದೆ.
ಲಾಲು ಪ್ರಸಾದ್ ಅವರು ಜನನಾಯಕರಾಗಿದ್ದು, ಜನರಲ್ಲಿ ಅವರ ಕುರಿತಾಗಿರುವ ಸಕಾರಾತ್ಮಕ ಭಾವನೆಗಳಿಗೆ ವಿರುದ್ಧವಾಗಿ ಅವರನ್ನು ಖಳನಾಯಕರಂತೆ ಬಿಂಬಿಸುವ ಯತ್ನ ನಡೆಸುತ್ತಿದೆ. ಲಾಲು ಪ್ರಸಾದ್ ಅವರನ್ನು ಜೈಲಿಗೆ ಕಳುಹಿಸಿ, ಡಿಸೆಂಬರ್ ನಲ್ಲಿ ವಿಧಾನಸಭೆ ಚುನಾವಣೆ ನಡೆಸಿ ಲಾಭ ಪಡೆಯಲು ಬಿಜೆಪಿ ಷಡ್ಯಂತ್ರ ರೂಪಿಸಿದೆ. ಚುನಾವಣೆಯ ಗೆಲುವಿಗೆ ಲಾಲು ಪ್ರಸಾದ್ ಅವರು ಅಡ್ಡಿಯಾಗುತ್ತಾರೆ ಎಂಬ ಭಯದಿಂದ ಅವರನ್ನು ಮೇವು ಹಗರಣದಲ್ಲಿ ಸಿಲುಕಿಸಲಾಗಿದೆ. ಶೀಘ್ರ ಬಿಜೆಪಿ ಕುತಂತ್ರಕ್ಕೆ ತಕ್ಕ ತಿರುಗೇಟು ನೀಡಲಿದ್ದೇವೆ. ಮೇವು ಹಗರಣಕ್ಕೆ ಸಂಬಂಧಿಸಿದ ತೀರ್ಪುಗಳ ವಿರುದ್ಧ ಮೇಲ್ಮನವಿ ಸಲ್ಲಿಸುತ್ತೇವೆ’ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.
ಲಾಲೂ ಪ್ರಸಾದ್ ಅವರು ಜನನಾಯಕರಾಗಿದ್ದು, ಜನರ ಭಾವನೆಯಲ್ಲಿ ಅವರನ್ನು ಖಳನಾಯಕರಾಗಿ ಬಿಂಬಿಸುವ ಪ್ರಯತ್ನ ಸಾಗಿದೆ. ಸಿಬಿಐ ನ್ಯಾಯಾಲಯ ಏನೇ ಹೇಳಿರಬಹುದು. ಆದರೆ ಅದರ ಈ ತೀರ್ಪು ಅಂತಿಮವಲ್ಲ. ನಾವು ಶೀಘ್ರ ತೀರ್ಪು ಪ್ರಶ್ನಿಸಿ ಉನ್ನತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ ಮಾಡುತ್ತೇವೆ. ಅಗತ್ಯ ಬಿದ್ದರೆ ಸುಪ್ರೀಂ ಕೋರ್ಟ್ ನಲ್ಲೂ ಅರ್ಜಿ ಸಲ್ಲಿಕೆ ಮಾಡುತ್ತೇವೆ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.
ಇಂದು ಬೆಳಗ್ಗೆಯಷ್ಟೇ ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ತಪ್ಪಿತಸ್ಥ ಎಂದು ಸಿಬಿಐ ವಿಶೇಷ ನ್ಯಾಯಾಲಯ ಘೋಷಿಸಿತ್ತು. ಚಾಯಿಬಾಸಾ ಖಜಾನೆಯಲ್ಲಿ ರು.33.67 ಕೋಟಿ ಮೊತ್ತದ ವಂಚನೆ ಪ್ರಕರಣದ ಸಂಬಂಧ ಇಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದ್ದು, ಲಾಲು ಪ್ರಸಾದ್ ಮಾತ್ರವಲ್ಲದೇ ಬಿಹಾರ ಮಾಜಿ ಸಿಎಂ ಜಗನ್ನಾಥ್ ಮಿಶ್ರಾ ಅವರನ್ನು ಅಪರಾಧಿ ಎಂದು ಘೋಷಣೆ ಮಾಡಿರುವ ನ್ಯಾಯಾಲಯ ಅವರಿಗೂ 5 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೆ ಇಬ್ಬರಿಗೂ ತಲಾ 5 ಲಕ್ಷ ರು.ಗಳ ದಂಡ ವಿಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


