ಬಜೆಟ್ ಅಧಿವೇಶನ ಹಿನ್ನೆಲೆ, ಜ.28ರಂದು ಸರ್ವಪಕ್ಷ ಸಭೆ ಕರೆದ ಸುಮಿತ್ರಾ ಮಹಾಜನ್
ಬಜೆಟ್ ಅಧಿವೇಶನ ಪ್ರಾರಂಭವಾಗುಥಿನ್ನೆಲೆಯಲ್ಲಿ ಲೋಕಸಭಾಧ್ಯಕ್ಷೆ ಸುಮಿತ್ರಾ ಮಹಾಜನ್ ಜ.28ರಂದು ಸರ್ವಪಕ್ಷಗಳ ಸಭೆ ಕರೆದಿದ್ದಾರೆ.

Published On :
ನವದೆಹಲಿ: ಬಜೆಟ್ ಅಧಿವೇಶನ ಪ್ರಾರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಜ.28ರಂದು ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಸಂಸತ್ತಿನ ಬಜೆಟ್ ಅಧಿವೇಶನವು ಜ.29ರಿಂದ ಪ್ರಾರಂಭಗೊಳ್ಳಲಿದೆ.
ಬಜೆಟ್ ಅದಿವೇಶನದ ಮೊದಲ ಹಂತವು ಜ. 29ರಿಂದ ಫೆ.9ರವರೆಗೆ ನಡೆಯಲಿದೆ. ಅದೇ ರೀತಿ ಎರಡನೇ ಹಂತದ ಅಧಿವೇಶನ ಮಾ.5ರಿಂದ ಏ.6ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಮಾಹಿತಿ ನೀಡಿದರು.
ಫೆ.1ರಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಬಜೆಟ್ ಮಂಡನೆ ಮಾಡಲಿದ್ದು ಇದು ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಮಂಡಿಸುವ ಕಡೆಯ ಪೂರ್ಣ ಪ್ರಮಾಣದ ಬಜೆಟ್ ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿBudget Sessionಬಜೆಟ್ ಅಧಿವೇಶನSumitra Mahajanಸುಮಿತ್ರಾ ಮಹಾಜನ್Parliamentary Affairs Minister Ananth Kumarಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


