ದೇಶ

ಮುಸ್ಲಿಂ, ದಲಿತರ ಹತ್ಯೆ ಆಯ್ತು, ಇದೀಗ ಮಕ್ಕಳ ಮೇಲೆ ದೌರ್ಜನ್ಯ ನಾಚಿಕೆಗೇಡು: ಕೇಜ್ರಿವಾಲ್

ವಿವಾದಿತ ಪದ್ಮಾವತ್ ಚಿತ್ರದ ವಿರುದ್ಧ ಪ್ರತಿಭಟನೆ ವೇಳೆ ಕರ್ಣಿ ಸೇನೆಯ ಕಾರ್ಯಕರ್ತರು ಗುರುಗ್ರಾಮದ ಶಾಲಾ ಬಸ್ ಮೇಲೆ ದಾಳಿ ನಡೆಸಿದ್ದ ಪ್ರಕರಣಕ್ಕೆ...

ಮುಸ್ಲಿಂ, ದಲಿತರ ಹತ್ಯೆ ಆಯ್ತು, ಇದೀಗ ಮಕ್ಕಳ ಮೇಲೆ ದೌರ್ಜನ್ಯ ನಾಚಿಕೆಗೇಡು: ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Published On :
ನವದೆಹಲಿ: ವಿವಾದಿತ ಪದ್ಮಾವತ್ ಚಿತ್ರದ ವಿರುದ್ಧ ಪ್ರತಿಭಟನೆ ವೇಳೆ ಕರ್ಣಿ ಸೇನೆಯ ಕಾರ್ಯಕರ್ತರು ಗುರುಗ್ರಾಮದ ಶಾಲಾ ಬಸ್ ಮೇಲೆ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಿಡಿಕಾರಿದ್ದಾರೆ. 
ಮುಸ್ಲಿಂರ ಹತ್ಯೆ, ದಲಿತರ ಹತ್ಯೆ ಆದಾಗಲೂ ಸಹಿಸಿಕೊಂಡಿದ್ದೇವೆ. ಆದರೆ ಮಕ್ಕಳ ಮೇಲಿನ ದೌರ್ಜನ್ಯವನ್ನು ಸಹಿಸಲು ಸಾಧ್ಯವಿಲ್ಲ. ಇಂತಹ ದುಷ್ಕರ್ಮಿಗಳನ್ನು ಸುಮ್ಮನೆ ಬಿಡುವುದಿಲ್ಲ ಎಂದು ಕರ್ಣಿ ಸೇನೆಗೆ ಅರವಿಂದ್ ಕೇಜ್ರಿವಾಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ. 
ಛತ್ರಸಾಲಾ ಸ್ಟೇಡಿಯಂನಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್ ಅವರು, ಮಕ್ಕಳ ಮೇಲೆ ದಾಳಿ ನಡೆಸುವವರಿಗೆ ನಾಚಿಕೆಯಾಗಬೇಕು. ರಾಮನ ಭೂಮಿ ಭಾರತ. ಮಕ್ಕಳ ಮೇಲೆ ದಾಳಿ ನಡೆಸುವಂತಹ ಅಮಾನವೀಯತೆಯನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ. 
ಗಣ ರಾಜ್ಯೋತ್ಸವದ ಸಂದರ್ಭದಲ್ಲಿ ಮಕ್ಕಳ ಮೇಲಿನ ದಾಳಿಯಂತಹ ಕೃತ್ಯಗಳು ನಡೆದಿದ್ದು ನಾಚಿಕೆಗೇಡು. ಇದೊಂದು ದುರಾದೃಷ್ಟಕರ ಘಟನೆ. ಶಾಲಾ ವಾಹನದ ಮೇಲೆ ದಾಳಿ ನಡೆಸಿ ಮಕ್ಕಳಲ್ಲಿ ಭೀತಿ ಹುಟ್ಟಿಸಿದ ಕೃತ್ಯದ ಬಗ್ಗೆ ಕೇಳಿ ಕಳೆದ ರಾತ್ರಿ ನಿದ್ರೆಯೇ ಬರಲಿಲ್ಲ ಎಂದು ಹೇಳಿದರು. 
ನಾನು ಹಿಂದು. ನಾನು ರಾಮ ಭಕ್ತ. ರಾಮ ಯಾವತ್ತಾದರೂ ಮಕ್ಕಳ ಮೇಲೆ ದಾಳಿ ನಡೆಸಲು ಅವಕಾಶ ನೀಡುತ್ತಾನೆಯೇ ಎಂದು ಪ್ರಶ್ನಿಸಿದ್ದಾರೆ. 
ಭರತ ಭೂಮಿಯಲ್ಲಿ ರಾಮ, ಕೃಷ್ಣ, ಗೌತಮ ಬುದ್ಧ, ಮಹಾವೀರ ಜೈನ್, ಗುರು ನಾನಕ್ ದೇವ್, ಕಬೀರ, ಮಹಾತ್ಮ ಗಾಂಧಿ, ಪ್ರವಾದಿ ಮೊಹಮ್ಮದ್, ಜೀಸಸ್ ರಂತ ಮಹಾನ್ ಪುರುಷರು ಶಾಂತಿಯನ್ನೇ ಪ್ರತಿಪಾದಿಸಿದರು ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.