ದೇಶ

ಪದ್ಮಾವತ್ ವಿರೋಧಿಸಿ ಶಾಲಾ ಬಸ್ ಗೆ ಬೆಂಕಿ: 18 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಪದ್ಮಾವತ್ ಚಿತ್ರ ಬಿಡುಗಡೆ ವಿರೋಧಿಸಿ ನಿನ್ನೆ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಗುರುಗ್ರಾಮದಲ್ಲಿ 24 ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಗೆ ಬೆಂಕಿ ಹಚ್ಚಿದ....

ಪದ್ಮಾವತ್ ವಿರೋಧಿಸಿ ಶಾಲಾ ಬಸ್ ಗೆ ಬೆಂಕಿ: 18 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
ದಾಳಿಗೆ ಒಳಗಾದ ಶಾಲಾ ಬಸ್
Published On :
ಗುರುಗ್ರಾಮ: ಪದ್ಮಾವತ್ ಚಿತ್ರ ಬಿಡುಗಡೆ ವಿರೋಧಿಸಿ ನಿನ್ನೆ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಗುರುಗ್ರಾಮದಲ್ಲಿ 24 ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ 18 ಆರೋಪಿಗಳನ್ನು ಗುರುವಾರ ಬಂಧಿಸಲಾಗಿದೆ.
ಬಂಧಿತ ಆರೋಪಿಗಳನ್ನು ಇಂದು ಮಧ್ಯಾಹ್ನ ಸೋಹ್ನಾ ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ಕೋರ್ಟ್ ಎಲ್ಲಾ 18 ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಬುಧವಾರ ಸಂಜೆ ಕರ್ಣಿ ಸೇನಾ ಕಾರ್ಯಕರ್ತರು ಗುರುಗ್ರಾಮದಲ್ಲಿ ಮನೆಗೆ ಹಿಂತಿರುಗುತ್ತಿದ್ದ ಶಾಲಾ ಬಸ್‌ ಮೇಲೆ ಕಲ್ಲು ತೂರಾಟ ನಡೆಸಿದ್ದು, ಈ ವೇಳೆ ಸುಮಾರು 24 ಮಕ್ಕಳು ಬಸ್ ನಲ್ಲಿದ್ದರು. ಕಲ್ಲು ತೂರಾಟದ ವೇಳೆ ಮಕ್ಕಳು ಭಯದಿಂದ ಅಳುತ್ತಾ ಕೂಗಿಕೊಂಡು, ಕಲ್ಲೇಟಿನಿಂದ ತಪ್ಪಿಸಿಕೊಳ್ಳಲು ಕುರ್ಚಿಗಳ ಕೆಳಗೆ ತೂರಿ ಜೀವ ಉಳಿಸಿಕೊಂಡಿದ್ದಾರೆ. ಘಟನೆ ವೇಳೆ ಬಸ್ ನಲ್ಲಿ ಚಾಲಕ, ಸಹಾಯಕ, ಇಬ್ಬರು ಶಿಕ್ಷಕರು ಹಾಗೂ 24 ಪುಟ್ಟ ಮಕ್ಕಳು ಇದ್ದರು ಎಂದು ತಿಳಿದುಬಂದಿದೆ.
ದಾಳಿಯಿಂದಾಗಿ ಬಸ್ಸಿನ ಗಾಜುಗಳು ಒಡೆದಿದ್ದು ಕಾರ್ಯಕರ್ತರ ಈ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಗುರುಗ್ರಾಮ-ಅಲ್ವಾರ್‌ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸಾರ್ವಜನಿಕರ ಮುಂದೆಯೇ ಪಟ್ರೋಲ್‌ ಬಾಂಬ್‌ ದಾಳಿ ನಡೆಸಿದ ದುಷ್ಕರ್ಮಿಗಳ ಗುಂಪು, ಬಸ್ಸಿಗೆ ಸಂಪೂರ್ಣವಾಗಿ ಬೆಂಕಿಗೆ ಹಚ್ಚಿದ್ದಾರೆ. ಆದರೆ ಪೊಲೀಸರು ಕೂಡಲೇ ಈ ಗುಂಪನ್ನು ತಡೆದು ಆಗಬಹುದಾಗಿದ್ದ ಅನಾಹುತವನ್ನು ತಪ್ಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.