ದೇಶದ ಮೊದಲ ‘ತೇಲುವ ಮಾರುಕಟ್ಟೆ’ ಕೋಲ್ಕತ್ತಾದಲ್ಲಿ ಆರಂಭ
69ನೇ ಗಣರಾಜ್ಯೋತ್ಸವದಂದು ಭಾರತದ ಮೊದಲ ತೇಲುವ ಮಾರುಕಟ್ಟೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಶುಕ್ರವಾರ ಅನಾವರಣಗೊಂಡಿದೆ....

Published On :
ಕೋಲ್ಕತ್ತಾ: 69ನೇ ಗಣರಾಜ್ಯೋತ್ಸವದಂದು ಭಾರತದ ಮೊದಲ ತೇಲುವ ಮಾರುಕಟ್ಟೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಶುಕ್ರವಾರ ಅನಾವರಣಗೊಂಡಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು ದೇಶದ ಮೊದಲ ತೇಲುವ ಮಾರುಕಟ್ಟೆಗೆ ಚಾಲನೆ ನೀಡಿದ್ದು, 114 ಬೋಟ್ ಗಳಲ್ಲಿ 228 ಮಂದಿ ವ್ಯಾಪಾರಿಗಳು ತಮ್ಮ ವಹಿವಾಟು ಆರಂಭಿಸಿದ್ದಾರೆ.
ಕೋಲ್ಕತ್ತಾದ ಪಟುಲಿ ಪ್ರದೇಶದಲ್ಲಿ ಕೋಲ್ಕತ್ತಾ ಮೆಟ್ರೋಪಾಲಿಟನ್ ಅಭಿವೃದ್ಧಿ ಪ್ರಾಧಿಕಾರ ಸುಮಾರು 10 ಕೋಟಿ ರು. ವೆಚ್ಚದಲ್ಲಿ ಈ ತೇಲುವ ಮಾರುಕಟ್ಟೆಯನ್ನು ನಿರ್ಮಿಸಿದ್ದು, 500 ಮೀ. ಉದ್ದ ಹಾಗೂ 60 ಮೀ. ಅಗಲಕ್ಕೆ ವ್ಯಾಪಿಸಿದೆ.
ಪ್ರಮುಖ ಆಕರ್ಷಣೀಯ ಕೇಂದ್ರವಾಗಿರುವ ಇದನ್ನು ನೋಡಲು ಮತ್ತು ಇಲ್ಲಿ ಸಾಮಾಗ್ರಿಗಳನ್ನು ಖರೀದಿಸಲು ಜನ ಮುಗಿಬಿದ್ದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


