69ನೇ ಗಣರಾಜ್ಯೋತ್ಸವ: ಮುಂಜಾಗ್ರತಾ ಕ್ರಮವಾಗಿ ಕಾಶ್ಮೀರದಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ
69ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿರುವ ಭಾರತದ ಸಂಭ್ರಮಕ್ಕೆ ಉಗ್ರರು ಮತ್ತು ಇತರೆ ದುಷ್ಕರ್ಮಿಗಳು ಅಡ್ಡಿ ಪಡಿಸುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಕಾಶ್ಮೀರದಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.

Published On :
ಶ್ರೀನಗರ: 69ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿರುವ ಭಾರತದ ಸಂಭ್ರಮಕ್ಕೆ ಉಗ್ರರು ಮತ್ತು ಇತರೆ ದುಷ್ಕರ್ಮಿಗಳು ಅಡ್ಡಿ ಪಡಿಸುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಕಾಶ್ಮೀರದಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.
ಕಾಶ್ಮೀರದ ಉಗ್ರ ಪೀಡಿತ ಜಿಲ್ಲೆಗಳಾದ ಪುಲ್ವಾಮ, ಅನಂತ್ ನಾಗ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗಿದ್ದು, ಸೂಕ್ಷ್ಮ ಮತ್ತು ಅತ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜನೆ ಮಾಡಲಾಗಿದೆ. ನಿನ್ನೆಯಿಂದಲೇ ಮೊಬೈಲ್ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗಿದ್ದು, ಗಣರಾಜ್ಯೋತ್ಸವ ಮತ್ತು ಸ್ವತಂತ್ರ್ಯ ದಿನಾಚರಣೆ ಸಂಭ್ರಮದ ವೇಳೆ ಇಂಟರ್ ನೆಟ್ ಸೇವೆ ಸ್ಥಗಿತ ಸಾಮಾನ್ಯವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನು ಕಾಶ್ಮೀರದಲ್ಲಿ ಗಣರಾಜ್ಯೋತ್ಸ ಕಾರ್ಯಕ್ರಮ ನಡೆಯಲಿರುವ ಶ್ರೀನಗರದ ಶೇರ್ ಇ ಕಾಶ್ಮೀರ ಕ್ರಿಕೆಟ್ ಮೈದಾನಕ್ಕೆ ವ್ಯಾಪಕ ಭದ್ರತೆ ಒದಗಿಸಲಾಗಿದೆ. ಮುಖ್ಯಮಂತ್ರಿ ಮುಫ್ತಿ ಮೆಹಬೂಬಾ ಅವರು ಇಂದು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಗಡಿಯಲ್ಲಿ ಹೆಚ್ಚುವರಿ ಪಡೆಗಳ ನಿಯೋಜನೆ
ಇನ್ನು ಇತ್ತೀಚೆಗಷ್ಟೇ ಪ್ರಕ್ಷುಬ್ಧವಾಗಿದ್ದ ಇಂಡೋ-ಪಾಕ್ ಕೊಂಚ ಶಾಂತವಾಗಿದ್ದು, ಗಣರಾಜ್ಯೋತ್ಸವ ನಿಮಿತ್ತ ಮತ್ತೆ ಪಾಕ್ ಸೈನಿಕರು ಭಾರತವನ್ನು ಕೆಣಕುವ ಸಾಧ್ಯತೆ ಇರುವುದರಿಂದ ಗಡಿಯಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜನೆ ಮಾಡಲಾಗಿದೆ. ಶಾರ್ಪ್ ಶೂಟರ್ ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗಡಿಯಲ್ಲಿ ನಿಯೋಜನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಶ್ರೀನಗರSrinagarಜಮ್ಮು ಮತ್ತು ಕಾಶ್ಮೀರJammu and Kashmirಭಾರತೀಯ ಸೇನೆ69th Republic Day69ನೇ ಗಣರಾಜ್ಯೋತ್ಸ ದಿನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


