ದೇಶ

ಕಾಂಬೊಡಿಯಾ ಪ್ರಧಾನಿಗೆ ರಾಷ್ಟ್ರಪತಿ ಭವನದಲ್ಲಿ ಔಪಚಾರಿಕ ಸ್ವಾಗತ

ಕಾಂಬೋಡಿಯಾ ಪ್ರಧಾನಿ ಸಾಮ್ದೆಕ್ ಅಕ್ಕಾ ಮೊಹಾ ಸೇನಾ ಪಾಡಿ ಟೆಕೊ ಹನ್ ಸೇನ್ ಅವರಿಗೆ ....

ಕಾಂಬೊಡಿಯಾ ಪ್ರಧಾನಿಗೆ ರಾಷ್ಟ್ರಪತಿ ಭವನದಲ್ಲಿ ಔಪಚಾರಿಕ ಸ್ವಾಗತ
ರಾಷ್ಟ್ರಪತಿ ಭವನದಲ್ಲಿ ಕಾಂಬೊಡಿಯಾ ಪ್ರಧಾನಿಗೆ ಔಪಚಾರಿಕ ಸ್ವಾಗತ ಕೋರಿದ ಪ್ರಧಾನಿ ನರೇಂದ್ರ ಮೋದಿ
Published On :
ನವದೆಹಲಿ: ಕಾಂಬೋಡಿಯಾ ಪ್ರಧಾನಿ ಸಾಮ್ದೆಕ್ ಅಕ್ಕಾ ಮೊಹಾ ಸೇನಾ ಪಾಡಿ ಟೆಕೊ ಹನ್ ಸೇನ್ ಅವರಿಗೆ ಶನಿವಾರ ರಾಷ್ಟ್ರಪತಿ ಭವನದಲ್ಲಿ ಔಪಚಾರಿಕ ಸ್ವಾಗತ ಕೋರಲಾಯಿತು.
ನಂತರ ರಾಜ್ ಘಟ್ ನಲ್ಲಿ ಮಹಾತ್ಮಾ ಗಾಂಧಿ ಸ್ಮಾರಕದಲ್ಲಿ ಹಾರ ಹಾಕುವ ಕಾರ್ಯಕ್ರಮ ನಡೆಯಿತು. ಇಂದು ಮಧ್ಯಾಹ್ನ ನಂತರ ವಿದೇಶಾಂಗ ಖಾತೆ ಸಚಿವೆ ಸುಷ್ಮಾ ಸ್ವರಾಜ್ ಕಾಂಬೊಡಿಯಾ ಪ್ರಧಾನಿಯನ್ನು ಭೇಟಿ ಮಾಡಲಿದ್ದಾರೆ.ನಂತರ ಸಂಜೆ ಭಾರತ ಮತ್ತು ಕಾಂಬೊಡಿಯಾ ದೇಶಗಳ ಪ್ರಧಾನಿಗಳು ದ್ವಿಪಕ್ಷೀಯ ಸಂಬಂಧ ವರ್ಧನೆ ಕುರಿತು ಮಾತುಕತೆ ನಡೆಸಲಿದ್ದಾರೆ.
ಕಾಂಬೊಡಿಯಾ ಪ್ರಧಾನಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡುವ ಕಾರ್ಯಕ್ರಮಗಳು ಕೂಡ ನಿಗದಿಯಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.