ಮತ್ತೆ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ: ಓರ್ವ ನಾಗರಿಕ, ಸೈನಿಕ ಸಾವು
ಪಾಕಿಸ್ತಾನ ಸೈನಿಕರು ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ ಪರಿಣಾಮ ಭಾನುವಾರ ಗಡಿ ನಿಯಂತ್ರಣ ರೇಖೆ ಬಳಿ ಓರ್ವ ನಾಗರಿಕ ಮತ್ತು ಓರ್ವ ಸೈನಿಕ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

Published On :
ಶ್ರೀನಗರ: ಪಾಕಿಸ್ತಾನ ಸೈನಿಕರು ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ ಪರಿಣಾಮ ಭಾನುವಾರ ಗಡಿ ನಿಯಂತ್ರಣ ರೇಖೆ ಬಳಿ ಓರ್ವ ನಾಗರಿಕ ಮತ್ತು ಓರ್ವ ಸೈನಿಕ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.
ಭಾನುವಾರ ಕಾಶ್ಮೀರದ ಮನ್ ಕೋಟ್ ಮತ್ತು ಕೃಷ್ಣಾ ಘಾಟಿ ಸೆಕ್ಟರ್ ನಲ್ಲಿ ಗ್ರಾಮಗಳನ್ನು ಗುರಿಯಾಗಿಸಿಕೊಂಡು ಪಾಕ್ ಸೈನಿಕರು ದಾಳಿ ನಡೆಸಿದ್ದು, ಈ ವೇಳೆ ಓರ್ವ ಸೈನಿಕ ಮತ್ತು ಓರ್ವ ನಾಗರಿಕರು ಸಾವನ್ನಪ್ಪಿದ್ದಾರೆ. ಅಂತೆಯೇ ಗಡಿ ನಿಯಂತ್ರಣ ರೇಖೆಯ ಬಳಿಯಲ್ಲಿ ಗ್ರಾಮಗಳಲ್ಲಿ ವಿವಿಧ ಪ್ರಕರಣಗಳಲ್ಲಿ ಸುಮಾರು 45 ಮಂದಿ ನಾಗರಿಕರು ಗಾಯಗೊಂಡಿದ್ದಾರೆ.
ಈ ಘಟನೆಯಿಂದ ಮತ್ತೆ ಇಂಡೋ-ಪಾಕ್ ಗಡಿ ಪ್ರಕ್ಷುಬ್ಧವಾಗಿದ್ದು, ಪಾಕ್ ಸೇನೆಯ ದಾಳಿಗೆ ಭಾರತೀಯ ಸೇನೆಯ ಸೈನಿಕರೂ ದಿಟ್ಟ ಉತ್ತರ ನೀಡುತ್ತಿದ್ದಾರೆ.
ಪೊಲೀಸ್ ಚೌಕಿ ಮೇಲೆ ಉಗ್ರರ ದಾಳಿ, ಪೊಲೀಸರಿಗೆ ಗಾಯ
ಅಂತೆಯೇ ಇತ್ತ ಸೋಪುರ್ ಜಿಲ್ಲೆಯ ಪೊಲೀಸ್ ಚೌಕಿ ಮೇಲೆ ಉಗ್ರರು ದಾಳಿ ನಡೆಸಿದ್ದು, ಉಗ್ರರು ಎಸೆದ ಹ್ಯಾಂಡ್ ಗ್ರೆನೇಡ್ ಸ್ಫೋಟಗೊಂಡು ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗ್ರೆನೇಡ್ ಎಸೆಯುತ್ತಿದ್ದಂತೆಯೇ ಉಗ್ರರು ಪರಾರಿಯಾಗಿದ್ದು, ಪರಾರಿಯಾಗಿರುವ ಉಗ್ರರಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಶ್ರೀನಗರSrinagarPakistanಪಾಕಿಸ್ತಾನCeasefire Violationಕದನ ವಿರಾಮ ಉಲ್ಲಂಘನೆಭಾರತೀಯ ಸೇನೆLoCಎಲ್ ಒಸಿ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


