ದೇಶ

ಮಹದಾಯಿ: ಕರ್ನಾಟಕ ವಿರುದ್ಧ ನಿರ್ಣಯಕ್ಕೆ ಗೋವಾ ಡೆಪ್ಯೂಟಿ ಸ್ಪೀಕರ್ ಮೈಕೆಲ್ ಲೋಬೋ ಪ್ರಸ್ತಾವನೆ

ಬಜೆಟ್ ಅಧಿವೇಶನದಲ್ಲಿ ಕರ್ನಾಟಕ ವಿರುದ್ಧ ನಿರ್ಣಯ ಮಂಡಿಸುವುದಾಗಿ ಗೋವಾ ವಿಧಾನಸಭೆ ಉಪಸಭಾಧ್ಯಕ್ಷ ಮೈಕೇಲ್ ಲೋಬೊ ಹೇಳಿದ್ದಾರೆ.

ಮಹದಾಯಿ: ಕರ್ನಾಟಕ ವಿರುದ್ಧ ನಿರ್ಣಯಕ್ಕೆ ಗೋವಾ ಡೆಪ್ಯೂಟಿ ಸ್ಪೀಕರ್ ಮೈಕೆಲ್ ಲೋಬೋ ಪ್ರಸ್ತಾವನೆ
ಕರ್ನಾಟಕದ ಕಣಕುಂಬಿಗೆ ನಿನ್ನೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಗೋವಾ ಸರ್ಕಾರದ ನಿಯೋಗ
Published On :

ಪಣಜಿ:  ಮಲಪ್ರಭಾ ನದಿ ಪಾತ್ರದಲ್ಲಿ  ಮಹದಾಯಿ ಉಪನದಿಯಿಂದ ನೀರನ್ನು ಕರ್ನಾಟಕ ತನ್ನ ಕಡೆ ತಿರುಗಿಸಿಕೊಂಡಿದೆ  ಎಂದು ಗೋವಾ ವಿಧಾನಸಭೆ ಉಪಸಭಾಧ್ಯಕ್ಷ ಮೈಕೇಲ್ ಲೋಬೊ ಆರೋಪಿಸಿದ್ದು, ಬಜೆಟ್ ಅಧಿವೇಶನದಲ್ಲಿ ಕರ್ನಾಟಕ ವಿರುದ್ಧ ನಿರ್ಣಯ ಮಂಡಿಸುವುದಾಗಿ ಹೇಳಿದ್ದಾರೆ.

 ಕರ್ನಾಟಕದ ಕಣಕುಂಬಿಗೆ ನಿನ್ನೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಲೋಬೊ,  ಕಣಕುಂಬಿಯಲ್ಲಿ ನೀರಾವರಿ ಕಾಲುವೆ ಕಾಮಗಾರಿ ಕೈಗೊಳ್ಳುವ ಮೂಲಕ ಕರ್ನಾಟಕ ಸರ್ಕಾರ ಸಂಪೂರ್ಣ ನೀರನ್ನು ತಿರುಗಿಸಲಾಗಿದೆ, ತಳಮಟ್ಟದ ನೀರು ಮಾತ್ರ ಗೋವಾ ಕಡೆಗೆ ಹರಿಯುತ್ತಿದೆ ಎಂದು ಆರೋಪಿಸಿದರು.

ಕರ್ನಾಟಕ  ಸರ್ಕಾರ ನೀರನ್ನು ತಿರುಗಿಸಿರುವುದನ್ನು ವಿರೋಧಿಸಿ ಮುಂಬರುವ ಬಜೆಟ್ ಅಧಿವೇಶನ ಸಂದರ್ಭದಲ್ಲಿ ನಿರ್ಣಯ ಮಂಡಿಸಲಾಗುವುದು ಎಂದು ಹೇಳಿದರು.

ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಕರ್ನಾಟಕ ಹಾಗೂ ಗೋವಾ ನಡುವಿನ ವಿವಾದ ಸಂಬಂಧ ಮಹದಾಯಿ ನ್ಯಾಯಾಧೀಕರಣದಲ್ಲಿ  ವಿಚಾರಣೆ ನಡೆಯುತ್ತಿದ್ದು, ನ್ಯಾಯಾಧೀಕರಣ ಕಣಕುಂಬಿಗೆ ಭೇಟಿ ನೀಡಿ ವಾಸ್ತವತೆ ಪರಿಶೀಲಿಸಬೇಕೆಂದು ಒತ್ತಾಯಿಸಿದ್ದಾರೆ.

ಕರ್ನಾಟಕ ಸರ್ಕಾರ ರಾಜಕೀಯ ಮಾಡುತ್ತಿದ್ದು, ಮಾತುಕತೆ ಮೂಲಕ ಸಮಸ್ಯೆ ಪರಿಹಾರ ಸಾಧ್ಯವಿಲ್ಲ. ನ್ಯಾಯಾಧೀಕರಣ ಮಾತ್ರ ಪರಿಹಾರ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.