ದೇಶ

ಈ ಬಾರಿಯ ಬಜೆಟ್ ನಲ್ಲಿ ಪ್ರತಿಯೊಬ್ಬರ ಆಶಯ ಈಡೇರಿಸಲಾಗುವುದು: ಪ್ರಧಾನಿ ಮೋದಿ

ಇಂದಿನಿಂದ ಬಜೆಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಬಾರಿಯ ಬಜೆಟ್ ನಲ್ಲಿ ಪ್ರತಿಯೊಬ್ಬರ ಆಶಯ ಈಡೇರಿಸಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರಮೋದಿ ಹೇಳಿದ್ದಾರೆ.

ಈ ಬಾರಿಯ ಬಜೆಟ್ ನಲ್ಲಿ ಪ್ರತಿಯೊಬ್ಬರ ಆಶಯ ಈಡೇರಿಸಲಾಗುವುದು: ಪ್ರಧಾನಿ ಮೋದಿ
ಪ್ರದಾನಮಂತ್ರಿ ನರೇಂದ್ರಮೋದಿ ಅವರ (ಸಾಂದರ್ಭಿಕ ಚಿತ್ರ)
Published On :

ದೆಹಲಿ: ಇಂದಿನಿಂದ ಬಜೆಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಬಾರಿಯ ಬಜೆಟ್ ನಲ್ಲಿ ಪ್ರತಿಯೊಬ್ಬರ ಆಶಯ ಈಡೇರಿಸಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರಮೋದಿ ಹೇಳಿದ್ದಾರೆ.

ಸಂಸತ್ ಭವನದ ಹೊರಗಡೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಪ್ರಗತಿಯತ್ತ ಮುನ್ನುಗ್ಗುತ್ತಿದೆ. ದೇಶದ ಎಲ್ಲಾ ಕ್ಷೇತ್ರಗಳಲ್ಲಿಯೂ ಬೆಳವಣಿಗೆಯಾಗುತ್ತಿದ್ದು, ಒಳ್ಳೆಯ ಅಭಿಪ್ರಾಯಗಳು ಮೂಡಿಬರುತ್ತಿವೆ ಎಂದರು.

ಬಜೆಟ್ ನಲ್ಲಿನ  ಆಶಯ ಕುರಿತು ಚರ್ಚಚಿಸಲು ಸಂಸದೀಯ ಸಮಿತಿಯ ಸಲಹೆಯನ್ನು ಬಳಸಿಕೊಳ್ಳಲಾಗುವುದು,  ಗ್ರಾಮೀಣ ಭಾರತ, ಕೃಷಿಕರು, ಪರಿಶಿಷ್ಟ ಜಾತಿ ಮತ್ತು ಪಂಗಡ ಮತ್ತು ಕಾರ್ಮಿಕ ಸಮುದಾಯದ ಬಲವರ್ದನೆಗೆ ಚಿಂತನೆ ಮಾಡಿರುವುದಾಗಿ ತಿಳಿಸಿದರು.

 ಮುಸ್ಲಿಂ ಮಹಿಳೆಯರ ರಕ್ಷಣೆಗಾಗಿ ತ್ರಿವಳಿ ತಲಾಖ್ ಮಸೂದೆ ಬಜೆಟ್ ಅಧಿವೇಶನದಲ್ಲಿಯೇ ಕಾಯ್ದೆಯಾಗಿ ಜಾರಿಯಾಗಲು ಎಲ್ಲಾ ಪಕ್ಷಗಳು ಬೆಂಬಲ ನೀಡಬೇಕೆಂದು ಇದೇ ವೇಳೆ ಪ್ರಧಾನಿ ನರೇಂದ್ರಮೋದಿ ಮನವಿ ಮಾಡಿಕೊಂಡರು.
 


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.