ದೇಶ

ಬೀಗಮುದ್ರೆ ಅಭಿಯಾನಕ್ಕೆ ತಾತ್ಕಾಲಿಕ ನಿಷೇಧ ಕೋರಿ ಸುಪ್ರೀಂ ಕೋರ್ಟ್ ಮೊರೆ: ಅರವಿಂದ್ ಕೇಜ್ರಿವಾಲ್

ಬೀಗಮುದ್ರೆ ಅಭಿಯಾನಕ್ಕೆ ತಾತ್ಕಾಲಿಕ ನಿಷೇಧ ತರುವಂತೆ ಕೋರಿ ತಮ್ಮ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ...

ಬೀಗಮುದ್ರೆ ಅಭಿಯಾನಕ್ಕೆ ತಾತ್ಕಾಲಿಕ ನಿಷೇಧ ಕೋರಿ ಸುಪ್ರೀಂ ಕೋರ್ಟ್ ಮೊರೆ: ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Published On :
ನವದೆಹಲಿ: ಬೀಗಮುದ್ರೆ ಅಭಿಯಾನಕ್ಕೆ ತಾತ್ಕಾಲಿಕ ನಿಷೇಧ ತರುವಂತೆ ಕೋರಿ ತಮ್ಮ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಈ ಬಗ್ಗೆ ದೆಹಲಿಯ ಬಿಜೆಪಿ ನಾಯಕರು ಮತ್ತು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಧ್ಯೆ ನಡೆದ ಸಭೆ ವಿಫಲವಾಗಿದೆ.
ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ಮನೋಜ್ ತಿವಾರಿ ನೇತೃತ್ವದ ನಿಯೋಗ ಮುಖ್ಯಮಂತ್ರಿ ನಿವಾಸದಲ್ಲಿ ನಡೆದ ಸಭೆಯನ್ನು ಮೊಟಕುಗೊಳಿಸಿ ಹೊರನಡೆದಿದ್ದು, ಆಪ್ ಸರ್ಕಾರ ವಿಷಯವನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಬಿಜೆಪಿ ಸಭೆಯಲ್ಲಿ ಭಾಗವಹಿಸಿಲ್ಲವಾದುದರಿಂದ ಬೀಗಮುದ್ರೆ ಅಭಿಯಾನಕ್ಕೆ ತಾತ್ಕಾಲಿಕ ತಡೆ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದ್ದಾರೆ.
ದೆಹಲಿ ನಗರದೊಳಗೆ ಜನವಸತಿ ಪ್ರದೇಶಗಳಲ್ಲಿ ಅಕ್ರಮವಾಗಿ ನಡೆಯುತ್ತಿರುವ ವ್ಯಾಪಾರ ಅಂಗಡಿಗಳು ಮತ್ತು ಮಳಿಗೆಗಳಿಗೆ ದೆಹಲಿ ಮಹಾನಗರ ಪಾಲಿಕೆ ಬೀಗಮುದ್ರೆ ಹಾಕುವುದಕ್ಕೆ ಬೀಗಮುದ್ರೆ ಅಭಿಯಾನ ಎಂದು ಕರೆಯಲಾಗುತ್ತದೆ.
ಈ ಸಭೆ ನಡೆಯದಿರುವುದಕ್ಕೆ ನನಗೆ ಬೇಸರವಿದೆ. ಹೀಗಾಗಿ ಬೀಗಮುದ್ರೆ ಅಭಿಯಾನಕ್ಕೆ ತಾತ್ಕಾಲಿಕ ನಿಷೇಧ ಹೇರುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಲಾಗುವುದು ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದರು.
ಬೀಗಮುದ್ರೆ ಅಭಿಯಾನವನ್ನು ಸಾರ್ವಜನಿಕ ರ್ಯಾಲಿಯಾಗಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರು ಬದಲಾಯಿಸಿರುವುದರಿಂದ ಸಭೆಯಿಂದ ಹೊರನಡೆದೆವು ಎಂದು ಬಿಜೆಪಿ ದೆಹಲಿ ಅಧ್ಯಕ್ಷ ಮನೋಜ್ ತಿವಾರಿ ಪ್ರತಿಕ್ರಿಯಿಸಿದ್ದಾರೆ.
ಬೀಗಮುಗ್ರೆ ಅಭಿಯಾನದಿಂದ ತೊಂದರೆಗೀಡಾದ ವ್ಯಾಪಾರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಲು ಮಾರುಕಟ್ಟೆಗಳಿಗೆ ಭೇಟಿ ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ನಗರಪಾಲಿಕೆ ನಿಯಮಗಳನ್ನು ಉಲ್ಲಂಘಿಸಿದ ವಾಣಿಜ್ಯ ಕಟ್ಟಡಗಳಿಗೆ ದೆಹಲಿಯಲ್ಲಿ ಕಳೆದ ತಿಂಗಳಿನಿಂದ ಬೀಗಮುದ್ರೆ ಹಾಕಲಾಗುತ್ತಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.