'ಇನ್ನೂ ಬೇಕು...' ಎಂದ ಬಾಲಕನ ಮೇಲೆ ಬಿಸಿ ದಾಲ್ ಸುರಿದ ಮಧ್ಯಾಹ್ನದ ಬಿಸಿಯೂಟ ಸಿಬ್ಬಂದಿ!
ಇನ್ನೂ ಸ್ವಲ್ಪ ದಾಲ್ ಬೇಕು ಎಂದು ಕೇಳಿದ ಪ್ರಥಮ ತರಗತಿ ವಿದ್ಯಾರ್ಥಿಯ ಮೇಲೆ ಮಧ್ಯಾಹ್ನದ ಬಿಸಿಯೂಟ ಸಿಬ್ಬಂದಿಯೊಬ್ಬರು ದಾಲ್ ಸುರಿದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

Published On :
ಭೋಪಾಲ್: ಇನ್ನೂ ಸ್ವಲ್ಪ ದಾಲ್ ಬೇಕು ಎಂದು ಕೇಳಿದ ಪ್ರಥಮ ತರಗತಿ ವಿದ್ಯಾರ್ಥಿಯ ಮೇಲೆ ಮಧ್ಯಾಹ್ನದ ಬಿಸಿಯೂಟ ಸಿಬ್ಬಂದಿಯೊಬ್ಬರು ದಾಲ್ ಸುರಿದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಪ್ರಥಮ ತರಗತಿ ವಿದ್ಯಾರ್ಥಿ ಪ್ರಿನ್ಸ್ ತನಗೆ ಇನ್ನೂ ಸ್ವಲ್ಪ ದಾಲ್ ಬೇಕೆಂದು ಕೇಳಿದ್ದ, ಆದರೆ ದಾಲ್ ಹಾಕುವ ಬದಲು ಸಿಬ್ಬಂದಿಯೊಬ್ಬರು ವಿದ್ಯಾರ್ಥಿಯ ಮೇಲೆಯೇ ಬಿಸಿ ದಾಲ್ ನ್ನು ಹಾಕಿದ್ದು, ವಿದ್ಯಾರ್ಥಿಯ ಮುಖ, ಗಂಟಲು ಎದೆ ಭಾಗದಲ್ಲಿ ತೀವ್ರವಾಗಿ ಸುಟ್ಟ ಗಾಯಗಳಾಗಿವೆ.
ತಕ್ಷಣವೇ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಪ್ರಾಣ ಅಪಾಯದಿಂದ ವಿದ್ಯಾರ್ಥಿ ಪಾರಾಗಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ದಾಲ್ ಸುರಿದ ಸಿಬ್ಬಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


