ಎಸ್ ಪಿ, ಬಿಎಸ್ ಪಿ ಸರ್ಕಾರಕ್ಕಿಂತಲೂ ಯೋಗಿ ಆಡಳಿತದಲ್ಲಿ ಭ್ರಷ್ಟಾಚಾರ ಹೆಚ್ಚು: ಉತ್ತರ ಪ್ರದೇಶ ಸಚಿವ
ಉತ್ತರ ಪ್ರದೇಶದ ಸಚಿವರೇ ಮುಖ್ಯಮಂತ್ರಿಗಳ ಬಗ್ಗೆ ನಕಾರಾತ್ಮಕ ಅಭಿಪ್ರಾಯ ಮೂಡುವ ರೀತಿಯಲ್ಲಿ ಹೇಳಿಕೆ ನೀಡಿದ್ದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಡಳಿತದಲ್ಲಿ ಈ ಹಿಂದಿನ ಎಸ್ ಪಿ, ಬಿಎಸ್ ಪಿ ಆಡಳಿತಕ್ಕಿಂತ

Published On :
ಲಖನೌ: ಉತ್ತರ ಪ್ರದೇಶದ ಸಚಿವರೇ ಮುಖ್ಯಮಂತ್ರಿಗಳ ಬಗ್ಗೆ ನಕಾರಾತ್ಮಕ ಅಭಿಪ್ರಾಯ ಮೂಡುವ ರೀತಿಯಲ್ಲಿ ಹೇಳಿಕೆ ನೀಡಿದ್ದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಡಳಿತದಲ್ಲಿ ಈ ಹಿಂದಿನ ಎಸ್ ಪಿ, ಬಿಎಸ್ ಪಿ ಆಡಳಿತಕ್ಕಿಂತ ಹೆಚ್ಚು ಭ್ರಷ್ಟಾಚಾರವಿದೆ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದ ಸಚಿವ ಓಂ ಪ್ರಕಾಶ್ ರಾಜ್ ಭರ್ ಈ ಹೇಳಿಕೆ ನೀದಿದ್ದು, ಯೋಗಿ ಆದಿತ್ಯನಾಥ್ ಅವರ ಆಡಳಿತದಲ್ಲಿ ಭ್ರಷ್ಟಾಚಾರ ಹೆಚ್ಚಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಮಿತ್ರ ಪಕ್ಷ ಸುಹೆಲ್ದೇವ್ ಭಾರತೀಯ ಸಮಾಜ ಪಕ್ಷದ ಮುಖ್ಯಸ್ಥರಾಗಿರುವ ರಾಜ್ ಭರ್, ಈಗಿನ ಸರ್ಕಾರ ತಮ್ಮ ಪಕ್ಷಕ್ಕೆ ಮಾನ್ಯತೆ ನೀಡುತ್ತಿಲ್ಲ, ಈ ಹಿಂದಿನ ಬಿಎಸ್ ಪಿ, ಎಸ್ ಪಿ ಆಡಳಿತಕ್ಕಿಂತ ಹೆಚ್ಚು ಭ್ರಷ್ಟಾಚಾರ ಈಗಿನ ಸರ್ಕಾರದಲ್ಲಿ ನಡೆಯುತ್ತಿದೆ, ನಾನು ಈ ಸರ್ಕಾರದ ಭಾಗವಾಗಿದ್ದೇನೆ, ಆದರೆ ಈ ಸರ್ಕಾರ ನನ್ನದಲ್ಲ ಎಂದು ಹೇಳಿದ್ದಾರೆ.
ಇನ್ನು 2019 ರ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಸ್ಪರ್ಧಿಸುವ ವಿಷಯ ಬಿಜೆಪಿ ಹೇಗೆ ನಡೆದುಕೊಳ್ಳುತ್ತದೆ ಎಂಬುದರ ಮೇಲೆ ಅವಲಂಬಿತವಾಗಿದೆ ಎಂದು ರಾಜ್ ಭರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಉತ್ತರ ಪ್ರದೇಶYogi Adityanathಯೋಗಿ ಆದಿತ್ಯನಾಥ್Uttar Pradesh governmentMinister Om Prakash Rajbharಸಚಿವ ಓಂ ಪ್ರಕಾಶ್ ರಾಜ್ ಭರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


