ದೇಶ

ಸೇನಾ ಸಿಬ್ಬಂದಿ ವಿರುದ್ಧ ಎಫ್ಐಆರ್ ಹಿಂಪಡೆಯಿರಿ, ಇಲ್ಲಾ ಸರ್ಕಾರ ಉರುಳುತ್ತೆ: ಕಾಶ್ಮೀರ ಸಿಎಂ ಗೆ ಸ್ವಾಮಿ

ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಬ್ಬರು ನಾಗರಿಕರ ಹತ್ಯೆಗೆ ಸಂಬಂಧಿಸಿದಂತೆ ಸೇನಾ ಸಿಬ್ಬಂದಿಗಳ ವಿರುದ್ಧ ಎಫ್ಐಆರ್ ದಾಖಲಿಸಿರುವ ಬಗ್ಗೆ ಮಾತನಾಡಿರುವ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ....

ಸೇನಾ ಸಿಬ್ಬಂದಿ ವಿರುದ್ಧ ಎಫ್ಐಆರ್ ಹಿಂಪಡೆಯಿರಿ, ಇಲ್ಲಾ ಸರ್ಕಾರ ಉರುಳುತ್ತೆ: ಕಾಶ್ಮೀರ ಸಿಎಂ ಗೆ ಸ್ವಾಮಿ
ಸುಬ್ರಹ್ಮಣಿಯನ್ ಸ್ವಾಮಿ
Published On :
ನವದೆಹಲಿ: ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಬ್ಬರು ನಾಗರಿಕರ ಹತ್ಯೆಗೆ ಸಂಬಂಧಿಸಿದಂತೆ ಸೇನಾ ಸಿಬ್ಬಂದಿಗಳ ವಿರುದ್ಧ ಎಫ್ಐಆರ್ ದಾಖಲಿಸಿರುವ ಬಗ್ಗೆ ಮಾತನಾಡಿರುವ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ, ಎಫ್ಐಆರ್ ನ್ನು ಕೂಡಲೇ ವಾಪಸ್ ಪಡೆಯುವಂತೆ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರನ್ನು ಒತ್ತಾಯಿಸಿದ್ದಾರೆ. 
ಸೇನಾ ಸಿಬ್ಬಂದಿ ವಿರುದ್ಧ ಎಫ್ಐಆರ್ ವಾಪಸ್ ಪಡೆಯದೇ ಇದ್ದಲ್ಲಿ ಜಮ್ಮು-ಕಾಶ್ಮೀರದ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ. ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಕಲ್ಲು ತೂರಾಟಗಾರರ ಗುಂಪಿನ ಮೇಲೆ ಸೇನಾ ಸಿಬ್ಬಂದಿ ನಡೆಸಿದ್ದ ಗುಂಡಿನ ದಾಳಿಗೆ ಇಬ್ಬರು ಯುವಕರು ಬಲಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ಸಿಎಂ ಮೆಹಬೂಬಾ ಮುಫ್ತಿ ಸೇನಾ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಿಸಿ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಸೂಚನೆ ನೀಡಿದ್ದರು. 
ಈ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಸುಬ್ರಹ್ಮಣಿಯನ್ ಸ್ವಾಮಿ, ಜಮ್ಮು-ಕಾಶ್ಮೀರದಲ್ಲಿ ನಾವು ಸರ್ಕಾರವನ್ನಾದರೂ ಯಾಕೆ ನಡೆಸುತ್ತಿದ್ದೇವೆ ಇನ್ನೂ ಅರ್ಥವಾಗಿಲ್ಲ ಎಂದು ಗುಡುಗಿದ್ದು, ಮೊದಲು ಎಫ್ಐಆರ್ ವಾಪಸ್ ಪಡೆಯುವಂತೆ ಸೂಚನೆ ನೀಡಿ, ಇಲ್ಲವಾದಲ್ಲಿ ಸರ್ಕಾರ ಉರುಳುತ್ತದೆ ಎಂಬ ಎಚ್ಚರಿಕೆ ರವಾನೆ ಮಾಡಿ ಎಂದು ಪಕ್ಷ ಹಾಗೂ ಕೇಂದ್ರ ಸರ್ಕಾರಕ್ಕೆ ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.