ದೇಶ

ಅಫ್ಘಾನಿಸ್ತಾನದಲ್ಲಿ ಭೂಕಂಪ: 6.1 ತೀವ್ರತೆ; ದೆಹಲಿ ಸೇರಿ ಉತ್ತರ ಭಾರತದ ಹಲವೆಡೆ ಕಂಪನ

ರಾಜಧಾನಿ ದೆಹಲಿ, ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 6.1ಷ್ಟು ತೀವ್ರತೆ ದಾಖಲಾಗಿದೆ ಎಂದು ಬುಧವಾರ ತಿಳಿದುಬಂದಿದೆ...

ಅಫ್ಘಾನಿಸ್ತಾನದಲ್ಲಿ ಭೂಕಂಪ: 6.1 ತೀವ್ರತೆ; ದೆಹಲಿ ಸೇರಿ ಉತ್ತರ ಭಾರತದ ಹಲವೆಡೆ ಕಂಪನ
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ರಾಜಧಾನಿ ದೆಹಲಿ, ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 6.1ಷ್ಟು ತೀವ್ರತೆ ದಾಖಲಾಗಿದೆ ಎಂದು ಬುಧವಾರ ತಿಳಿದುಬಂದಿದೆ. 
ಇಂದು ಮಧ್ಯಾಹ್ನ 12.40ಸುಮಾರಿಗೆ ಭೂಮಿ ಕಂಪಿಸಿದ್ದು, ಅಫ್ಘಾನಿಸ್ತಾನದ ಹಿಂದೂಖುಷ್ ಪರ್ವತ ಪ್ರದೇಶದಲ್ಲಿ ಕಂಪನದ ಕೇಂದ್ರಬಿಂದು ಕಂಡುಬಂದಿದೆ. ಭೂಮಿ ಕಂಪಿಸುತ್ತಿದ್ದಂತೆಯೇ ಆತಂಕಗೊಂಡ ಜನರು ಮನೆಗಳಿಂದ ಹೊರಬಂದು ಬೀದಿಗಳಲ್ಲಿ ಗುಂಪಿ ಸೇರಿದ್ದಾರೆ. 
ದೆಹಲಿ, ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ಹಿಮಾಚಲ ಪ್ರದೇಶ, ಹರಿಯಾಣ, ಪಾಕಿಸ್ತಾನ, ಆಫ್ಘಾನಿಸ್ತಾನಗಳಲ್ಲಿ ಭೂಮಿ ಕಂಪಿಸಿರುವುದಾಗಿ ವರದಿಗಳು ತಿಳಿಸಿವೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.