ಭೀಮಾ ಕೊರೇಗಾಂವ್ ಹಿಂಸಾಚಾರ: ಪ್ರಮುಖ ಆರೋಪಿ ಜಾಮೀನು ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ
ಭೀಮಾ ಕೊರೇಗಾಂವ್ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಮಿಳಿಂದ್ ಏಕ್ಬೋಟ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯಿಂದ ಬಾಂಬೆ ಹೈಕೋರ್ಟ್ ನ ನ್ಯಾಯಾಧೀಶರು ಹಿಂದೆ ಸರಿದಿದ್ದಾರೆ.

Published On :
ಮುಂಬೈ: ಭೀಮಾ ಕೊರೇಗಾಂವ್ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಮಿಳಿಂದ್ ಏಕ್ಬೋಟ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯಿಂದ ಬಾಂಬೆ ಹೈಕೋರ್ಟ್ ನ ನ್ಯಾಯಾಧೀಶರು ಹಿಂದೆ ಸರಿದಿದ್ದಾರೆ.
ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿ ಬಿಆರ್ ಗವಾಯಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯಿಂದ ಹಿಂದೆ ಸರಿದಿದ್ದು, ಏಕ್ಬೋಟ್ ನಿರೀಕ್ಷಣಾ ಜಾಮೀನು ಅರ್ಜಿ ಮತ್ತೊಂದು ಪೀಠದ ಎದುರು ವಿಚಾರಣೆಗೆ ಬಂದಿದೆ. ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡುವುದಕ್ಕೆ ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಬಾಂಬೆ ಹೈಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಲಾಗಿತ್ತು. ಇದಕ್ಕೂ ಮುನ್ನ ಕಳೆದ ವಾರ ಪುಣೆಯ ವಿಶೇಷ ನ್ಯಾಯಾಲಯ ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.
ಮಿಳಿಂದ್ ಏಕ್ಬೋಟ್ ವಿರುದ್ಧ 2 ಎಫ್ಐಆರ್ ಗಳು ದಾಖಲಾಗಿದ್ದು, ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪ, ಕೊಲೆ ಯತ್ನದ ಆರೋಪ, ದಲಿತರ ವಿರುದ್ಧ ಹಲ್ಲೆಯ ಆರೋಪವನ್ನು ಎದುರಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Bombay High Courtಬಾಂಬೆ ಹೈಕೋರ್ಟ್Bhima Koregaon violenceMilind Ekboteಭೀಮಾ ಕೊರೇಗಾಂವ್ ಹಿಂಸಾಚಾರಮಿಳಿಂದ್ ಏಕ್ಬೋಟ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


