ಆರ್ಎಸ್ಎಸ್ ಮಹಿಳೆಯರನ್ನು ಅಶಕ್ತಗೊಳಿಸುತ್ತಿದೆ; ನಮ್ಮದು ಅದರ ಸಿದ್ಧಾಂತದ ವಿರುದ್ಧ ಹೋರಾಟ: ರಾಹುಲ್ ಗಾಂಧಿ
ಮುಂಬರುವ ಮೇಘಾಲಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪ್ರಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬಿಜೆಪಿ ಮತ್ತು ಆರ್ಎಸ್ಎಸ್...

Published On :
ಶಿಲ್ಲಾಂಗ್: ಮುಂಬರುವ ಮೇಘಾಲಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪ್ರಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್‌ಎಸ್‌ಎಸ್) ಮತ್ತು ಬಿಜೆಪಿ ದೇಶದಾದ್ಯಂತ ತಮ್ಮ ಸಿದ್ಧಾಂತವನ್ನು ಹರಡುತ್ತಿದೆ. ನಾವು ಅದರ ಸಿದ್ಧಾಂತ ವಿರುದ್ಧ ಹೋರಾಡುತ್ತಿದ್ದೇವೆ. ಬಿಜೆಪಿ ಮತ್ತು ಆರ್ಎಸ್ಎಸ್ ವಿಶೇಷವಾಗಿ ಈಶಾನ್ಯದಲ್ಲಿ ನಿಮ್ಮ ಸಂಸ್ಕೃತಿ, ಭಾಷೆ ಮತ್ತು ಜೀವನ ವಿಧಾನವನ್ನು ಹಾಳುಗೆಡವಲು ಪ್ರಯತ್ನಿಸುತ್ತಿದೆ ಎಂದರು.
ಸೆಂಟ್ ಎಡ್ಮಂಡ್ಸ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಅವರು, ಬಿಜೆಪಿ ಅವರು ಆಕ್ರಮಣಶೀಲ ಆಲೋಚನೆ ಹೊಂದಿದ್ದು ಮೇಘಾಲಯದಲ್ಲಿ ಬಿಜೆಪಿ ಸರ್ಕಾರ ರಚಿಸಿದರೆ ರಾಜ್ಯದ ಸಂಸ್ಕೃತಿ, ಧರ್ಮ ಮತ್ತು ಜೀವನಕ್ಕೆ ತೊಡಕುಂಟಾಗಲಿದೆ ಎಂದರು.
ಇದೇ ವೇಳೆ ಆರ್ಎಸ್ಎಸ್ ನಲ್ಲಿ ಮಹಿಳೆಯರನ್ನು ಅಶಕ್ತರನ್ನಾಗಿಸುತ್ತಿದ್ದು ಮಹಿಳೆಯರಿಗಿಂತ ಪುರುಷರಿಗೆ ಹೆಚ್ಚು ಅಧಿಕಾರವನ್ನು ನೀಡುತ್ತಿದ್ದಾರೆ. ನಮ್ಮ ಸಮಾಜದಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಶಸ್ತ್ಯವಿದೆ. ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಮತ್ತು ಅದನ್ನು ಸಕ್ರಿಯಗೊಳಿಸುವುದರಲ್ಲಿ ಅವರು ನಿರ್ಣಾಯಕ ಪಾತ್ರ ವಹಿಸುತ್ತಾರೆ. ಇಷ್ಟಾದರೂ ಆರ್ಎಸ್ಎಸ್ ಮಹಿಳಾ ಹಕ್ಕುಗಳ ಮೇಲೆ ನಂಬಿಕೆ ಇಲ್ಲ ಮತ್ತು ಸಮಾಜದಲ್ಲಿ ಭಯವಿಲ್ಲದೆ ಪ್ರಾಬಲ್ಯ ಸಾಧಿಸಲು ಪುರುಷರಿಗೆ ಹೆಚ್ಚು ಶಕ್ತಿ ನೀಡುತ್ತಿದೆ ಎಂದು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


