ಹಿಂದಿಯಲ್ಲಿ ಕಚೇರಿ ವ್ಯವಹಾರ ನಡೆಸುವಂತೆ ಇಲಾಖೆಗಳಿಗೆ ಹರಿಯಾಣ ಸರ್ಕಾರ ಆದೇಶ
ಇನ್ನು ಮುಂದೆ ಕಚೇರಿಯ ಎಲ್ಲಾ ಪತ್ರ ವ್ಯವಹಾರವನ್ನು ಹಿಂದಿ ಭಾಷೆಯಲ್ಲಿ ನಡೆಸುವಂತೆ ಹರಿಯಾಣ ಸರ್ಕಾರ ವಿವಿಧ ಇಲಾಖೆಗಳಿಗೆ ಹಾಗೂ ನಿಗಮ,....

Published On :
ಚಂಡಿಗಢ: ಇನ್ನು ಮುಂದೆ ಕಚೇರಿಯ ಎಲ್ಲಾ ಪತ್ರ ವ್ಯವಹಾರವನ್ನು ಹಿಂದಿ ಭಾಷೆಯಲ್ಲಿ ನಡೆಸುವಂತೆ ಹರಿಯಾಣ ಸರ್ಕಾರ ವಿವಿಧ ಇಲಾಖೆಗಳಿಗೆ ಹಾಗೂ ನಿಗಮ, ಮಂಡಳಿಗಳಿಗೆ ಗುರುವಾರ ಅಧಿಸೂಚನೆ ಹೊರಡಿಸಿದೆ.
ಸುಪ್ರೀಂ ಕೋರ್ಟ್ ಹಾಗೂ ಇತರೆ ಕೋರ್ಟ್ ಗಳಿಗೆ ಸಂಬಂಧಿಸಿದ ಕಾನೂನು ವಿಷಯಗಳನ್ನು ಹೊರತುಪಡಿಸಿ ಇತರೆ ಎಲ್ಲಾ ಕಚೇರಿ ವ್ಯವಹಾರವನ್ನು ಸಾರ್ವಜನಿಕರೊಂದಿಗೆ ಹಿಂದಿ ಭಾಷೆಯಲ್ಲಿ ನಡೆಸಬೇಕು ಎಂದು ಇಲಾಖೆಗಳಿಗೆ ಸೂಚಿಸಿರುವುದಾಗಿ ಸರ್ಕಾರ ವಕ್ತಾರರು ತಿಳಿಸಿದ್ದಾರೆ.
ಇಲಾಖೆಗಳು ಎಲ್ಲಾ ಮಾದರಿಯ ಅರ್ಜಿಗಳನ್ನು ಹಿಂದಿ ಮತ್ತು ಇಂಗ್ಲಿಷ್ ಗೆ ಅನುವಾದ ಮಾಡಬೇಕು ಮತ್ತು ಅದನ್ನು ತಮ್ಮ ತಮ್ಮ ವೆಬ್ ಸೈಟ್ ಗಳಿಗೆ ಅಪಲೋಡ್ ಮಾಡಬೇಕು ಎಂದು ಎಲ್ಲಾ ಇಲಾಖೆಗೆಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


