ದೇಶ

ಸುಪ್ರೀಂ ಬಿಕ್ಕಟ್ಟು: ಹೊಸ ರೋಸ್ಟರ್ ಪ್ರಕಾರ ಸಿಜೆಐ ದೀಪಕ್ ಮಿಶ್ರಾರಿಂದ ಎಲ್ಲಾ ಪಿಎಲ್ಐ ವಿಚಾರಣೆ

ಪ್ರಕರಣಗಳ ವಿಚಾರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರದಿಂದ ಹೊಸ ರೋಸ್ಟರ್ ವ್ಯವಸ್ಥೆ ಜಾರಿಗೆ ಬಂದಿದ್ದು, ಸುಪ್ರೀಂ ಕೋರ್ಟ್ ಮುಖ್ಯ...

ಸುಪ್ರೀಂ ಬಿಕ್ಕಟ್ಟು: ಹೊಸ ರೋಸ್ಟರ್ ಪ್ರಕಾರ ಸಿಜೆಐ ದೀಪಕ್ ಮಿಶ್ರಾರಿಂದ ಎಲ್ಲಾ ಪಿಎಲ್ಐ ವಿಚಾರಣೆ
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ
Published On :
ನವದೆಹಲಿ: ಪ್ರಕರಣಗಳ ವಿಚಾರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರದಿಂದ ಹೊಸ ರೋಸ್ಟರ್ ವ್ಯವಸ್ಥೆ ಜಾರಿಗೆ ಬಂದಿದ್ದು, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ(ಸಿಜೆಐ) ದೀಪಕ್ ಮಿಶ್ರಾ ಅವರು ಫೆ.5ರಿಂದ ಮುಂದಿನ ಆದೇಶದವರೆಗೆ ಎಲ್ಲಾ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಎಲ್ ಐ)ಯ ವಿಚಾರಣೆ ನಡೆಸಲಿದ್ದಾರೆ.
ಈ ಸಂಬಂಧ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಹೊರಡಿಸಿರುವ ಆದೇಶವನ್ನು ಸರ್ವೋಚ್ಛ ನ್ಯಾಯಾಲಯದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ಕಳೆದ ಜನವರಿ 12ರಂದು ಸುಪ್ರೀಂ ಕೋರ್ಟ್‌ನ ನಾಲ್ವರು ಹಿರಿಯ ನ್ಯಾಯಮೂರ್ತಿಗಳಾದ ಜೆ. ಚಲಮೇಶ್ವರ್‌. ರಂಜನ್‌ ಗೊಗೋಯ್‌, ಮದನ್‌ ಬಿ.ಲೋಕೂರ್‌ ಮತ್ತು ಕುರಿಯನ್‌ ಜೋಸೆಫ್‌ ಪತ್ರಿಕಾಗೋಷ್ಠಿ ನಡೆಸಿ ಮುಖ್ಯ ನ್ಯಾಯಮೂರ್ತಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಯಾವ ಯಾವ ಪ್ರಕರಣಗಳನ್ನು ಯಾರಿಗೆ ವಹಿಸಬೇಕು ಎಂಬ ಬಗ್ಗೆ ಹೊಸ ರೋಸ್ಟರ್ ವ್ಯವಸ್ಥೆ ಜಾರಿಗೆ ತರಲಾಗಿದೆ ಮತ್ತು ಅದನ್ನು ಸಾರ್ವಜನಿಕವಾಗಿ ವೆಬ್ ಸೈಟ್ ನಲ್ಲಿ ಪ್ರಕಟಿಸುವ ನಿರ್ಧಾರಕ್ಕೆ ಬರಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.