ನೀರವ್ ಮೋದಿ ವಿರುದ್ದ ರೆಡ್ ಕಾರ್ನರ್ ನೋಟಿಸ್; ಯಾವ ದೇಶದಲ್ಲಿ ಅಡಗಿದ್ದರು ಬಂಧನ ಸಾಧ್ಯತೆ!
ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13 ಸಾವಿರ ಕೋಟಿ ರು. ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ವಜ್ರಾಭರಣ ವ್ಯಾಪಾರಿ ನೀರವ್ ಮೋದಿ ರೆಡ್ ಕಾರ್ನರ್ ನೋಟಿಸ್ ಜಾರಿಯಾಗಿದೆ...

Published On :
ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13 ಸಾವಿರ ಕೋಟಿ ರು. ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ವಜ್ರಾಭರಣ ವ್ಯಾಪಾರಿ ನೀರವ್ ಮೋದಿ ರೆಡ್ ಕಾರ್ನರ್ ನೋಟಿಸ್ ಜಾರಿಯಾಗಿದೆ.
ವಂಚನೆ ಪ್ರಕರಣ ನಂತರ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ನೀರವ್ ಮೋದಿಗೆ ರೆಡ್ ಕಾರ್ನರ್ ನೋಟಿಸ್ ನೀಡುವಂತೆ ಸಿಬಿಐ ಇಂಟರ್ ಪೋಲ್ ಗೆ ಪತ್ರ ಬರೆದಿತ್ತು. ಈ ಹಿನ್ನೆಲೆಯಲ್ಲಿ ನೀರವ್ ಮೋದಿ ವಿರುದ್ಧ ಇಂಟರ್ ಪೋಲ್ ರೆಡ್ ಕಾರ್ನರ್ ನೋಟಿಸ್ ನೀಡಿದ್ದು ಯಾವುದೇ ದೇಶದಲ್ಲಿದ್ದರೂ ಬಂಧಿಸುವ ಸಾಧ್ಯತೆ ಇದೆ.
13 ಸಾವಿರ ಕೋಟಿ ರುಪಾಯಿ ವಂಚನೆಗೆ ಸಂಬಂಧಿಸಿದಂತ ನೀರವ್ ಮೋದಿ ಹಾಗೂ ಅವರ ಅಂಕಲ್, ಗೀತಾಂಜಲಿ ಜೆಮ್ಸ್ ನ ಮೆಹುಲ್ ಚೋಕ್ಸಿ ವಿರುದ್ಧ ಸಿಬಿಐ ಎಫ್ ಐಆರ್ ದಾಖಲಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ನಾಲ್ಕು ಬಾರಿ ಸಮನ್ಸ್ ನೀಡಿದರೂ ಆರೋಪಿಗಳಿಂದ ಯಾವುದೇ ಪ್ರತಿಕ್ರಿಯೆ ಬರದ ಹಿನ್ನೆಲೆಯಲ್ಲಿ ಈಗ ರೆಡ್ ಕಾರ್ನರ್ ನೋಟಿಸ್ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CBIಸಿಬಿಐInterpolRed Corner Noticeರೆಡ್ ಕಾರ್ನರ್ ನೋಟಿಸ್ಇಂಟರ್ ಪೋಲ್Nirav Modiನೀರವ್ ಮೋದಿpnb scamಪಿಎನ್ಬಿ ಹಗರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


