ನಕಲಿ ಎನ್ ಕೌಂಟರ್ ಆರೋಪ: ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ನೋಟಿಸ್
ಉತ್ತರ ಪ್ರದೇಶದಲ್ಲಿ ಇತ್ತೀಚಿಗೆ ಹಲವು ಎನ್ ಕೌಂಟರ್ ಗಳು ನಡೆದಿವೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್....

Published On :
ನವದೆಹಲಿ: ಉತ್ತರ ಪ್ರದೇಶದಲ್ಲಿ ಇತ್ತೀಚಿಗೆ ಹಲವು ಎನ್ ಕೌಂಟರ್ ಗಳು ನಡೆದಿವೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಇತ್ತೀಚಿಗೆ ಉತ್ತರ ಪ್ರದೇಶದಲ್ಲಿ ಸುಮಾರು 500 ನಕಲಿ ಎನ್ ಕೌಂಟರ್ ನಡೆದಿವೆ ಎಂದು ಆರೋಪಿಸಿ ಎನ್ ಜಿಒವೊಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸುಪ್ರೀಂ ಪೀಠ, ಈ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ನೀಡಿದೆ.
ರಾಜ್ಯದಲ್ಲಿ ನಡೆದ ಸುಮಾರು 500 ನಕಲಿ ಎನ್ ಕೌಂಟರ್ ಗಳಲ್ಲಿ 58 ಮಂದಿ ಮೃತಪಟ್ಟಿದ್ದಾರೆ ಎಂದು ಅರ್ಜಿದಾರರ ಪರ ವಕೀಲ ಸಂಜಯ್ ಪಾರಿಖ್ ಅವರು ದೂರಿದ್ದಾರೆ.
ಈ ಸಂಬಂಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸಹ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂ ಕೋರ್ಟ್noticeನೋಟಿಸ್ನಕಲಿ ಎನ್ ಕೌಂಟರ್Uttar Pradesh governmentಉತ್ತರ ಪ್ರದೇಶ ಸರ್ಕಾರfake encounters
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


