ಜಮು-ಕಾಶ್ಮೀರ: ಪಿಡಿಪಿ-ಕಾಂಗ್ರೆಸ್ ಮೈತ್ರಿ ಉಗ್ರರ ಪರ- ಸುಬ್ರಮಣಿಯನ್ ಸ್ವಾಮಿ
ಪಿಡಿಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳು ಉಗ್ರರ ಪರ ಪಕ್ಷಗಳಾಗಿದ್ದು, ಮೈತ್ರಿ ಕುರಿತ ಊಹಾಪೋಗಳು ತಪ್ಪು ಕಲ್ಪನೆ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಮಂಗಳವಾರ ಹೇಳಿದ್ದಾರೆ...

Published On :
ನವದೆಹಲಿ: ಪಿಡಿಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳು ಉಗ್ರರ ಪರ ಪಕ್ಷಗಳಾಗಿದ್ದು, ಮೈತ್ರಿ ಕುರಿತ ಊಹಾಪೋಗಳು ತಪ್ಪು ಕಲ್ಪನೆ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಮಂಗಳವಾರ ಹೇಳಿದ್ದಾರೆ.
ಪಿಡಿಪಿ ಹಾಗೂ ಕಾಂಗ್ರೆಸ್ ಮೈತ್ರಿಗೆ ನಿರ್ಧರಿಸಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚನೆ ಮಾಡಲು ಮುಂದಾವೆ ಎಂಬ ಊಹಾಪೋಹಗಳು ಹರಿದಾಡುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸುಬ್ರಮಣಿಯನ್ ಸ್ವಾಮಿಯವರು, ಪಿಡಿಪಿ-ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದೇ ಆದರೆ, ರಾಜಕೀಯವಾಗಿ ನಮಗೆ ಉತ್ತಮವಾಗುತ್ತದೆ. ಆದರೆ, ಇದು ಕಾಶ್ಮೀರಕ್ಕೆ ಕೆಟ್ಟದಾಗಲಿದೆ ಎಂದು ಹೇಳಿದ್ದಾರೆ.
ಕಾಶ್ಮೀರ ಹಿತದೃಷ್ಟಿಯಿಂದ ನೋಡುವುದಾದರೆ ಪಿಡಿಪಿ-ಕಾಂಗ್ರೆಸ್ ಮೈತ್ರಿ ಸರಿಯಲ್ಲ. ಎರಡೂ ಪಕ್ಷಗಳೂ ಉಗ್ರರ ಪರವಾಗಿದೆ. ರಾಜಕೀಯ ದೃಷ್ಟಿಯಿಂದ ನೋಡುವುದಾದರೆ ಬಿಜೆಪಿಗೆ ಲಾಭವಾಗಲಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿSubramanian Swamyಸುಬ್ರಮಣಿಯನ್ ಸ್ವಾಮಿallianceಮೈತ್ರಿPDP-CongressPro terroristಪಿಡಿಪಿ-ಕಾಂಗ್ರೆಸ್ಉಗ್ರರ ಪರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


