ಟ್ವಿಟ್ಟರ್ ನಲ್ಲಿ ಮಗಳಿಗೆ 'ರೇಪ್' ಬೆದರಿಕೆ: ದೂರು ದಾಖಲಿಸಿದ ಪ್ರಿಯಾಂಕಾ ಚತುರ್ವೇದಿ
ತಮ್ಮ 10 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆಸುವುದಾಗಿ ಟ್ವಿಟ್ಟರ್ ನಲ್ಲಿ ವ್ಯಕ್ತಿಯೊಬ್ಬನಿಂದ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ...

Published On :
ಮುಂಬಯಿ: ತಮ್ಮ 10 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆಸುವುದಾಗಿ ಟ್ವಿಟ್ಟರ್ ನಲ್ಲಿ ವ್ಯಕ್ತಿಯೊಬ್ಬನಿಂದ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಚತುರ್ವೇದಿ ಕ್ರಿಮಿನಲ್ ಕೇಸ್ ದಾಖಲಿಸಿದ್ದಾರೆ.
ಪ್ರತಿದಿನ ನಮ್ಮನ್ನು ಟ್ರೋಲ್ ಮಾಡಲಾಗುತ್ತದೆ, ಆದರೆ ನನ್ನ ಮಗಳನ್ನು ಸಾಮಾಜಿಕ ಮಾಧ್ಯಮಕ್ಕೆ ಅನಗತ್ಯವಾಗಿ ಎಳೆದು ತರಲಾಗುತ್ತಿದೆ, ಹೀಗಾಗಿ ನಾನು ದೂರು ದಾಖಲಿಸಿದ್ದೇನೆ ಎಂದು ಪ್ರಿಯಾಂಕಾ ಹೇಳಿದ್ದಾರೆ.
ಟ್ವಿಟ್ಟರ್ ನಲ್ಲಿ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಈ ಸಂಬಂಧ ಮುಂಬಯಿ ಪೊಲೀಸರಿಗೆ ದೂರು ನೀಡಿದ್ದಾಗಿ ಹೇಳಿದ್ದಾರೆ,ಈ ಸಂಬಂಧ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.
@GirishK1605, ಎಂಬ ಟ್ವೀಟಿಗ ಚತುರ್ವೇದಿ ಅವರ ಮಗಳಿಗೆ ಕೆಟ್ಟದ್ದು ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪ್ರಿಯಾಂಕಾ ತಿಳಿಸಿದ್ದಾರೆ, ಆದರೆ ಟ್ವೀಟ್ ನಲ್ಲಿ ಆ ಹೆಸರಿನ ವ್ಯಕ್ತಿ ಇಲ್ಲ ಎಂದು ತಿಳಿದು ಬಂದಿದೆ.
ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಚರ್ಚೆಯಾಗುತ್ತಿದ್ದು, ನೆಟ್ಟಿಜನ್ ಹಾಗೂ ಹಲವು ರಾಜಕೀಯ ಮುಖಂಡರು ಪ್ರಿಯಾಂಕಾ ಅವರಿಗೆ ಬೆಂಬಲ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


