ಬಿಜೆಪಿ ನಾಯಕನಿಂದ ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ದೌರ್ಜನ್ಯ: ಶರ್ಟ್ ಕಾಲರ್ ಹಿಡಿದು ಎಳೆದಾಡಿ ಹಲ್ಲೆ
ಅಪಘಾತ ಮಾಡಿ ಓಡಿ ಹೋಗುತ್ತಿದ್ದ ಬೈಕ್ ತಡೆದಿದ್ದಕ್ಕೆ ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಮಾಡಿ, ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಮಧ್ಯ...

Published On :
ಭೂಪಾಲ್: ಅಪಘಾತ ಮಾಡಿ ಓಡಿ ಹೋಗುತ್ತಿದ್ದ ಬೈಕ್ ತಡೆದಿದ್ದಕ್ಕೆ ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಮಾಡಿ, ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಮಧ್ಯ ಪ್ರದೇಶದ ಭೂಪಾಲ್ ನಲ್ಲಿ ನಡೆದಿದೆ.
ಭೂಪಾಲ್ ನಿಂದ 275 ಕಿಮೀ ದೂರದಲ್ಲಿರುವ ತಿಕಂಗರ್ ಜಿಲ್ಲೆಯಲ್ಲಿ ಇಬ್ಬರು ಬೈಕ್ ಸವಾರರು ಬಾಲಕಿಯೊಬ್ಬಳಿಗೆ ಡಿಕ್ಕಿ ಹೊಡೆದು ತಪ್ಪಿಸಿಕೊಂಡು ಓಡಿ ಹೋಗುತ್ತಿದ್ದರು. ಈ ವೇಳೆ ಮಹಿಳಾ ಪೊಲೀಸ್ ಅಧಿಕಾರಿ ಬೈಕ್ ಸವಾರರನ್ನು ಅಡ್ಡಗಟ್ಟಿದ್ದಾರೆ, ಈ ವೇಳೆ ಡ್ರೈವಿಂಗ್ ಲೈಸೆನ್ಸ್, ಪ್ರಮಾಣ ಪತ್ರ ಇತ್ಯಾದಿ ದಾಖಲೆಗಳನ್ನು ಒದಗಿಸುವಂತೆ ಕೇಳಿದ್ದಾರೆ. ಈ ವೇಳೆಹಿಂಬದಿ ಕುಳಿತಿದ್ದ.ಭಾರತೀಯ ಜನತಾ ಪಕ್ಷ ಯುವ ಮೋರ್ಚಾ ಅಧ್ಯಕ್ಷ ಅಧಿಕಾರಿ ಜೊತೆ ದುರ್ವರ್ತನೆ ತೋರಿದ್ದಾರೆ.
ಮುನೇಂದ್ರ ಸಿಂಗ್ ಎಂಬಾತ ಅದಿಕಾರಿಯನ್ನು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ, ಸಾರ್ವಜನಿಕವಾಗಿ ಆಕೆಯ ಶರ್ಟ್ ಕಾಲರ್ ಹಿಡಿಗು ಹೊಡೆದಿದ್ದಾನೆ, ಹಾಗೂ ಆಕೆಯ ಹೊಟ್ಟೆಗೆ ಒದ್ದಿದ್ದಾನೆ ಎಂದು ಆರೋಪಿಸಲಾಗಿದೆ.
ಇದಾದ ನಂತರ ಅಲ್ಲಿದ್ದೆ ಪೊಲೀಸ್ ಸಿಬ್ಬಂದಿ ಮುನೇಂದ್ರ ಸಿಂಗ್ ನನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ., ಆರೋಪಿ ವಿರುದ್ದ ಈ ಹಿಂದೆ ಹಲವು ಕೇಸ್ ಗಳು ದಾಖಲಾಗಿವೆ ಎಂಬುದು ತನಿಖೆಯಿಂದ ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


