ದೇಶ

ಟ್ವೀಟರ್ ನಲ್ಲಿ ಸುಷ್ಮಾ ಸ್ವರಾಜ್ ಟ್ರೋಲ್ ಖಂಡಿಸಿದ ನಿತಿನ್ ಗಡ್ಕರಿ

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಸಾಮಾಜಿಕ ತಾಣದಲ್ಲಿ ಪದೇಪದೆ ಟ್ರೋಲ್ ಮಾಡಲಾಗುತ್ತಿದ್ದು, ಇದನ್ನ...

ಟ್ವೀಟರ್ ನಲ್ಲಿ ಸುಷ್ಮಾ ಸ್ವರಾಜ್ ಟ್ರೋಲ್ ಖಂಡಿಸಿದ ನಿತಿನ್ ಗಡ್ಕರಿ
ನಿತಿನ್ ಗಡ್ಕರಿ
Published On :
ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಸಾಮಾಜಿಕ ತಾಣದಲ್ಲಿ ಪದೇಪದೆ ಟ್ರೋಲ್ ಮಾಡಲಾಗುತ್ತಿದ್ದು, ಇದನ್ನು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಮಂಗಳವಾರ ಖಂಡಿಸಿದ್ದಾರೆ.
ಲಖನೌದ ಅಂತರರ್ಧಮಿಯ ದಂಪತಿಯ ಪಾಸ್ ಪೋರ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ತಾಣದಲ್ಲಿ ಸುಷ್ಮಾ ಸ್ವರಾಜ್ ಅವರ ವಿರುದ್ಧ ಬಳಸಿದ್ದ ಭಾಷೆಯನ್ನು ಖಂಡಿಸಿದ ನಿತಿನ್ ಗಡ್ಕರಿ ಅವರು, ಸುಷ್ಮಾಜಿ ಅವರು ದೇಶದಲ್ಲಿ ಇಲ್ಲದ ಸಂದರ್ಭದಲ್ಲಿ ಟ್ರೋಲ್ ಮಾಡುವುದು ವಿಷಾದಕರ ಮತ್ತು ಆಕ್ಷೇಪ ವ್ಯಕ್ತಪಡಿಸುತ್ತಿರುವ ರೀತಿಯೂ ಸರಿ ಇಲ್ಲ ಎಂದಿದ್ದಾರೆ.
ನಾವು ಪರಸ್ಪರ ಗೌರವ ನೀಡಬೇಕು. ಪರಸ್ಪರ ನಿಂದಿಸುವ ಕೆಲಸ ಮಾಡಬಾರದು ಎಂದು ಸಚಿವರು ಟ್ವೀಟಿಗರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ವಾರ ಮುಸ್ಲಿಂ ಸಮುದಾಯವನ್ನು ತೃಪ್ತಿಪಡಿಸುವ ಕೆಲಸವನ್ನು ನಿಲ್ಲಿಸುವಂತೆ ಆಕೆಗೆ ಬುದ್ದಿವಾದ ಹೇಳಿ ಎಂದು  ಸುಷ್ಮಾ ಸ್ವರಾಜ್ ಅವರ ಪತಿ ಸ್ವರಾಜ್ ಕೌಶಲ್ ಅವರಿಗೆ ಟ್ವಿಟ್ ಸಲಹೆ ನೀಡಿ ಟ್ರೋಲ್ ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.