ಎಐಸಿಸಿ ಸಾಮಾಜಿಕ ಜಾಲತಾಣ ಕಚೇರಿಯಲ್ಲಿ ಲೈಂಗಿಕ ಕಿರುಕುಳ, ಎಫ್ ಐಆರ್ ದಾಖಲಿಸುವಂತೆ ಬಿಜೆಪಿ ಆಗ್ರಹ
ಎಐಸಿಸಿ ಸಾಮಾಜಿಕ ಜಾಲತಾಣ ಕಚೇರಿಯಲ್ಲಿ ನಡೆದಿದೆ ಎನ್ನಲಾದ ಯುವತಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಳ್ಳುವಂತೆ ಬಿಜೆಪಿ ಪೊಲೀಸರನ್ನು ಒತ್ತಾಯಿಸಿದೆ.

Published On :
ನವದೆಹಲಿ: ಎಐಸಿಸಿ ಸಾಮಾಜಿಕ ಜಾಲತಾಣ ಕಚೇರಿಯಲ್ಲಿ ನಡೆದಿದೆ ಎನ್ನಲಾದ ಯುವತಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಳ್ಳುವಂತೆ ಬಿಜೆಪಿ ಪೊಲೀಸರನ್ನು ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ, ಎಐಸಿಸಿ ಸಾಮಾಜಿಕ ಜಾಲತಾಣ ಕಚೇರಿಯಲ್ಲಿನ ಸಹೋದ್ಯೋಗಿಯಿಂದ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ ಮಾಜಿ ಸದಸ್ಯರು ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣ ಘಟಕದ ಮುಖ್ಯಸ್ಥರ ಅಧೀನದಲ್ಲಿ ಆರೋಪಿಗಳು ಕೆಲಸ ನಿರ್ವಹಿಸುತ್ತಾರೆ ಎಂದು ಹೇಳಿದರು.
ದೂರು ನೀಡಿರುವ ಯುವತಿಯ ಸುರಕ್ಷತೆ ಬಗ್ಗೆ ಪೊಲೀಸರು ಕ್ರಮ ಕೈಗೊಳ್ಳಬೇಕು ಹಾಗೂ ಆರೋಪಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಳ್ಳುವಂತೆ ಅವರು ಆಗ್ರಹಿಸಿದರು. ಅನ್ಯಾಯಕ್ಕೊಳಗಾದ ಯುವತಿಗೆ ಸೂಕ್ತ ನ್ಯಾಯ ನೀಡುವ ನಿಟ್ಟಿನಲ್ಲಿ ದೆಹಲಿ ಪೊಲೀಸರು ಮುಂದಾಗುವಂತೆ ಅವರು ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿಸಾಮಾಜಿಕ ಜಾಲತಾಣಲೈಂಗಿಕ ಕಿರುಕುಳSexual harassmentSocial MediaMeenakshi Lekhiಮೀನಾಕ್ಷಿ ಲೇಖಿDivya Spandanaದಿವ್ಯಾ ಸ್ಪಂದನ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


