ಅಮರನಾಥ ಯಾತ್ರಿಕರ ಸಾವು; ಗೃಹ ರಾಜನಾಥ್ ಸಿಂಗ್ ಸಂತಾಪ
ಕಾಶ್ಮೀರದ ಗಂಡೆರ್ ಬಲ್ ಜಿಲ್ಲೆಯ ಬಲ್ತಲ್ ಮಾರ್ಗದಲ್ಲಿ ಸಂಭವಿಸಿದ ಭೂ ಕುಸಿತದ ಪರಿಣಾಮ 5 ಅಮರನಾಥ ಯಾತ್ರಾರ್ಥಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಬುಧವಾರ ಸಂತಾಪ ಸೂಚಿಸಿದ್ದಾರೆ...

Published On :
ನವದೆಹಲಿ: ಕಾಶ್ಮೀರದ ಗಂಡೆರ್ ಬಲ್ ಜಿಲ್ಲೆಯ ಬಲ್ತಲ್ ಮಾರ್ಗದಲ್ಲಿ ಸಂಭವಿಸಿದ ಭೂ ಕುಸಿತದ ಪರಿಣಾಮ 5 ಅಮರನಾಥ ಯಾತ್ರಾರ್ಥಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಬುಧವಾರ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಬಲ್ತಲ್ ಮಾರ್ಗದಲ್ಲಿ ಉಂಟಾದ ಭೂಕುಸಿತದಿಂದಾಗಿ ಅಮೂಲ್ಯ ಜೀವಗಳನ್ನು ಕಳೆದುಕೊಂಡಿದ್ದೇವೆ. ಯಾತ್ರಾರ್ಥಿಗಳ ಸಾವು ನೋವು ತಂದಿದೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.
ಬಲ್ತಲ್ ಮಾರ್ಗದಲ್ಲಿ ರೈಲ್ ಪಟ್ರಿ ಮತ್ತು ಬ್ರಾರಿಮಾರ್ಗ ನಡುವೆ ಭೂ ಕುಸಿತ ಸಂಭವಿಸಿ ಐವರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ಅಲ್ಲದೆ, ಮೂವರು ಯಾತ್ರಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ರಾಜನಾಥ್ ಸಿಂಗ್Twitterಟ್ವಿಟ್ಟರ್Rajnath SinghPilgrimsಯಾತ್ರಾರ್ಥಿಗಳುAmarnath pilgrimsಅಮರನಾಥ ಯಾತ್ರಿಕರುBrarimargಬ್ರಾರಿಮಾರ್ಗ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


