ದೇಶ

ಮಧ್ಯಪ್ರದೇಶ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, 10 ದಿನಗಳಲ್ಲಿ ನಾಲ್ಕನೇ ಪ್ರಕರಣ

ಸಾಗರ ಜಿಲ್ಲೆಯಲ್ಲಿ ಬುಡಕಟ್ಟು ಸಮುದಾಯದ 14 ವರ್ಷದ ಬಾಲಕಿ ಮೇಲೆ ನಾಲ್ವರು ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯಪ್ರದೇಶ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, 10 ದಿನಗಳಲ್ಲಿ ನಾಲ್ಕನೇ ಪ್ರಕರಣ
ಸಾಂದರ್ಭಿಕ ಚಿತ್ರ
Published On :

ಮಧ್ಯಪ್ರದೇಶ: ಸಾಗರ  ಜಿಲ್ಲೆಯಲ್ಲಿ ಬುಡಕಟ್ಟು ಸಮುದಾಯದ  14 ವರ್ಷದ ಬಾಲಕಿ ಮೇಲೆ  ನಾಲ್ವರು ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತೇಜ್ ಪುರ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಳೆದ  10 ದಿನಗಳಲ್ಲಿ ನಡೆದ ನಾಲ್ಕನೇ ಪ್ರಕರಣ ಇದಾಗಿದೆ ಎಂದು ಗೌರ್ಜಮರ್ ಠಾಣೆಯ  ಸಹಾಯಕ ಸಬ್ ಇನ್ಸ್ ಪೆಕ್ಟರ್ ಕೆ. ಎಲ್. ಅಹಿರ್ ವಾರ್  ಹೇಳಿದ್ದಾರೆ.

ನೆರೆಮನೆಯ ಕೆಲವರು ಸಂತ್ರಸ್ತ ಬಾಲಕಿಯ ಮನೆಯಲ್ಲಿಯೇ ಅತ್ಯಾಚಾರ ನಡೆಸಿದ್ದಾರೆ. ಬಾಲಕಿಯ ಪೋಷಕರು ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸಂತಸ್ತ ಬಾಲಕಿ  ಗ್ರಾಮದ ಸರ್ಕಾರಿ ಶಾಲೆಯ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡುಬಂದಿದ್ದಳು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನಂತರ ಆ ಬಾಲಕಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಆರೋಗ್ಯ ಸ್ಥಿತಿ ಸುಧಾರಿಸಿದೆ . ಬಾಲಕಿಯ ಹೇಳಿಕೆ ಪಡೆದು ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಶುಕ್ಲಾ ಹೇಳಿದ್ದಾರೆ.

ಮಧ್ಯಪ್ರದೇಶದಲ್ಲಿ ಕಳೆದ 10 ದಿನಗಳಲ್ಲಿ ನಡೆದ ನಾಲ್ಕನೇ ಪ್ರಕರಣ ಇದಾಗಿದೆ.  ಜೂನ್ 26  ಮಂಡಾಸೂರ್ ನಲ್ಲಿ ರಂದು ಎಂಟು ವರ್ಷದ ಬಾಲಕಿ ಮೇಲೆ ಇಬ್ಬರು ಅತ್ಯಾಚಾರ ನಡೆಸಿದ್ದರು. ಜೂನ್ 28 ರಂದ ಜಬಲ್ಪುರ ಜಿಲ್ಲೆಯಲ್ಲಿ 15 ವರ್ಷದ ಬಾಲಕಿ ಮೇಲೆ ಮೂವರು ಅತ್ಯಾಚಾರ ನಡೆಸಿದ್ದರು. ಸಾತ್ನಾದಲ್ಲಿ ಜುಲೈ 1 ರಂದು ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿತ್ತು.

 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.