ಅನ್ಯಾಯದ ವಿಚಾರಣೆಯಿಂದ ಸುರಕ್ಷಿತವಾಗುವವರೆಗೆ ಭಾರತಕ್ಕೆ ಬರುವುದಿಲ್ಲ: ಝಾಕಿರ್ ನಾಯಕ್
ನನ್ನ ವಿರುದ್ಧದ ಅನ್ಯಾಯದ ವಿಚಾರಣೆಯಿಂದ ಸುರಕ್ಷಿತವಾಗುವವರೆಗೆ ನಾನು ಭಾರತಕ್ಕೆ ಬರುವುದಿಲ್ಲ ಎಂದು ಭಾರತಕ್ಕೆ...

Published On :
ನವದೆಹಲಿ: ನನ್ನ ವಿರುದ್ಧದ ಅನ್ಯಾಯದ ವಿಚಾರಣೆಯಿಂದ ಸುರಕ್ಷಿತವಾಗುವವರೆಗೆ ನಾನು ಭಾರತಕ್ಕೆ ಬರುವುದಿಲ್ಲ ಎಂದು ಭಾರತಕ್ಕೆ ಬೇಕಾಗಿರುವ ವಿವಾದಿತ ಇಸ್ಲಾಂ ಧರ್ಮ ಪ್ರಚಾರಕ ಡಾ. ಝಾಕಿರ್ ನಾಯಕ್ ಅವರು ಬುಧವಾರ ಹೇಳಿದ್ದಾರೆ.
'ನಾನು ಭಾರತಕ್ಕೆ ಬರುತ್ತೇನೆ ಎಂಬ ಮಾಧ್ಯಮ ವರದಿ ಸಂಪೂರ್ಣ ಆಧಾರ ರಹಿತ ಮತ್ತು ಸುಳ್ಳು ಸುದ್ದಿ. ನನ್ನ ವಿರುದ್ಧದ ಅನ್ಯಾಯದ ವಿಚಾರಣೆಯಿಂದ ನಾನು ಸುರಕ್ಷಿತವಾಗುವವರೆಗೆ ಭಾರತಕ್ಕೆ ಬರುವ ಯಾವುದೇ ಯೋಚನೆ ಇಲ್ಲ' ಎಂದು ಝಾಕಿರ್ ನಾಯಕ್ ತಿಳಿಸಿದ್ದಾರೆ.
ಸರ್ಕಾರ ನನಗೆ ಏನು ಮಾಡುವುದಿಲ್ಲ. ನ್ಯಾಯೋಚಿತವಾಗಿದೆ ಎಂದು ನಾನು ಭಾವಿಸಿದಾಗ ಖಂಡಿತ ತಾಯಿ ನಾಡಿಗೆ ಮರಳುತ್ತೇನೆ ಝಾಕಿರ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸದ್ಯ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ವಿವಾದಿತ ಇಸ್ಲಾಂ ಧರ್ಮ ಪ್ರಚಾರಕ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ ಐಎ) ಮುಂದೆ ವಿಚಾರಣೆಗೆ ಹಾಜರಾಗಲು ವಿಫಲವಾಗಿದ್ದು, ಆರೋಪಿಯ ಪಾಸ್ ಪೋರ್ಟ್ ಅನ್ನು ರದ್ದುಗೊಳಿಸಲಾಗಿದೆ.
ಕೋಮುವಾದ ಮತ್ತು ಭಯೋತ್ಪಾದನೆ ಪ್ರಚೋದಕ ಭಾಷಣ ಹಾಗೂ ಹಣಕಾಸು ನೆರವು ನೀಡಿದ ಆರೋಪದ ಮೇಲೆ ನವೆಂಬರ್ 18, 2016ರಂದು ಝಾಕಿರ್ ನಾಯಕ್ ವಿರುದ್ಧ ಎನ್ ಐಎ ಕ್ರಿಮಿನಲ್ ಕೇಸ್ ದಾಖಲಿಸಿತ್ತು.
ಇನ್ನು ನಾಯಕ್ ಒಡೆತನದ ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ (ಐಆರ್‌ಎಫ್) ಸಂಸ್ಥೆಯನ್ನು ಕಾನೂನುಬಾಹಿರ ಚಟುವಟಿಕೆ ಕಾಯ್ದೆ ಅಡಿ ಕೇಂದ್ರ ಸರ್ಕಾರ ನಿಷೇಧ ಹೇರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


