ಲಖನೌ ಪಾಸ್ಪೋರ್ಟ್ ವಿವಾದ: ಅಧಿಕಾರದ ವ್ಯಾಪ್ತಿಯನ್ನು ಮೀರಿದ ಪಾಸ್ಪೋರ್ಟ್ ಅಧಿಕಾರಿ
ಅಂತರ್ಧರ್ಮೀಯ ವಿವಾಹವಾಗಿದ್ದ ದಂಪತಿಗಳಿಗೆ ಪಾಸ್ಪೋರ್ಟ್ ನೀಡುವುವ ಪ್ರಕ್ರಿಯೆ ವೇಳೆ ಕಿರುಕುಳ ಆರೋಪ ನೀಡಿದ್ದ ಪಾಸ್ಪೋರ್ಟ್ ಅಧಿಕಾರಿ ವಿಕಾಸ್ ಮಿಶ್ರಾ ತಮ್ಮ ಅಧಿಕಾರದ ವ್ಯಾಪ್ತಿಯನ್ನು ಮೀರಿದ್ದಾರೆ.

Published On :
ಲಖನೌ: ಅಂತರ್ಧರ್ಮೀಯ ವಿವಾಹವಾಗಿದ್ದ ದಂಪತಿಗಳಿಗೆ ಪಾಸ್ಪೋರ್ಟ್ ನೀಡುವುವ ಪ್ರಕ್ರಿಯೆ ವೇಳೆ ಕಿರುಕುಳ ಆರೋಪ ನೀಡಿದ್ದ ಪಾಸ್ಪೋರ್ಟ್ ಅಧಿಕಾರಿ ವಿಕಾಸ್ ಮಿಶ್ರಾ ತಮ್ಮ ಅಧಿಕಾರದ ವ್ಯಾಪ್ತಿಯನ್ನು ಮೀರಿದ್ದಾರೆ. ಈ ಮಾಹಿತಿ ವಿದೇಶಾಂಗ ಇಲಾಖೆಯ ಆಂತರಿಕ ತನಿಖೆಯಿಂದ ಬಹಿರಂಗಗೊಂಡಿದೆ.
ತನ್ವಿ ಸೇಠ್ ಹಾಗೂ ಅನಾಸ್ ಸಿದ್ದಿಕಿ ದಂಪತಿಗಳಿಗೆ ಪಾಸ್ಪೋರ್ಟ್ ನೀಡುವ ವಿಚಾರದಲ್ಲಿ ಉಂಟಾಗಿದ್ದ ವಿವಾದ ದೇಶಾದ್ಯಂತ ಸದ್ದು ಮಾಡಿದ್ದು, ಪಾಸ್ಪೋರ್ಟ್ ಅಧಿಕಾರಿ ತಮಗೆ ಕಿರುಕುಳ ನೀಡಿದ್ದಾರೆ ಎಂದು ಸೇಠ್ ಆರೋಪಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಇಲಾಖೆ ಆಂತರಿಕ ತನಿಖೆ ನಡೆಸಿದ್ದು, ವಿದೇಶಾಂಗ ಇಲಾಖೆ ಅಧಿಕಾರಿ ತಮ್ಮ ಅಧಿಕಾರದ ವ್ಯಾಪ್ತಿಯನ್ನು ಮೀರಿರುವುದು ತನಿಖೆಯಿಂದ ಬಹಿರಂಗಗೊಂಡಿದೆ.
ಪಾಸ್ಪೋರ್ಟ್ ಪಡೆಯುವುದಕ್ಕೆ ಸರ್ಕಾರಕ್ಕೆ ಸಲ್ಲಿಸಬೇಕಾದ ಅಗತ್ಯ ದಾಖಲಾತಿಗಳನ್ನು ಸೇಠ್ ಹಾಗೂ ಸಿದ್ದಿಕಿ ಸಲ್ಲಿಸಿದ್ದರು, ಅಷ್ಟೇ ಅಲ್ಲದೇ ಅವರ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳಿಲ್ಲ ಎಂದು ಆಂತರಿಕ ತನಿಖೆಯಿಂದ ದೃಢಪಟ್ಟಿದೆ. ತನ್ವಿ ಸೇಠ್ ಅವರು ಪಾಸ್ಪೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ಹಾಗೂ ಆಕೆ ಇದ್ದ ವಿಳಾಸ ಹೊಂದಾಣಿಕೆಯಾಗುತ್ತಿರಲಿಲ್ಲ ಎಂದು ಪಾಸ್ಪೋರ್ಟ್ ಅಧಿಕಾರಿ ವಿಕಾಸ್ ಮಿಶ್ರಾ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದರು. ಆದರೆ ಈಗ ಅಧಿಕಾರದ ವ್ಯಾಪ್ತಿಯನ್ನು ಮೀರಿ ಪಾಸ್ಪೋರ್ಟ್ ಅಧಿಕಾರಿ ನಡೆದುಕೊಂಡಿದ್ದಾರೆ ಎಂಬುದು ಆಂತರಿಕ ತನಿಖೆಯಿಂದ ಬಹಿರಂಗವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಲಖನೌLucknowPassport officerಅಂತರ್ಧರ್ಮೀಯ ವಿವಾಹInterfaith-couplePassport issueಪಾಸ್ಪೋರ್ಟ್ ವಿವಾದಪಾಸ್ಪೋರ್ಟ್ ಅಧಿಕಾರಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


