ಸುನಂದಾ ಸಾವು ಪ್ರಕರಣ; ಶಶಿ ತರೂರ್ ನಿರೀಕ್ಷಣಾ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ನ್ಯಾಯಾಲಯ
ದೇಶದಾದ್ಯಂತ ಭಾರೀ ಸುದ್ದಿಗೆ ಗ್ರಾಸವಾಗಿದ್ದ ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಶಶಿ ತರೂರ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಕುರಿತ ಆದೇಶವನ್ನು ದೆಹಲಿ ನ್ಯಾಯಾಲಯ...

Published On :
ನವದೆಹಲಿ: ದೇಶದಾದ್ಯಂತ ಭಾರೀ ಸುದ್ದಿಗೆ ಗ್ರಾಸವಾಗಿದ್ದ ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಶಶಿ ತರೂರ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಕುರಿತ ಆದೇಶವನ್ನು ದೆಹಲಿ ನ್ಯಾಯಾಲಯ ಕಾಯ್ದಿರಿಸಿದೆ.
ಪತ್ನಿ ಸುನಂದಾ ಸಾವು ಪ್ರಕರಣ ಕುರಿತಂತೆ ತಿರುವನಂತಪುರ ಸಂಸದ ಶಶಿ ತರೂರ್ ಅವರಿಗೆ ಈಗಾಗಲೇ ಸಮನ್ಸ್ ಜಾರಿಯಾಗಿದೆ. ಜೂನ್. 5 ರಂದು ಸಮನ್ಸ್ ಜಾರಿ ಮಾಡಿದ್ದ ನ್ಯಾಯಾಲಯ ಜು.7 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿತ್ತು. ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ನೀಡುವಂತೆ ಶಶಿ ತರೂರ್ ಅವರು ನ್ಯಾಯಾಲಯ ಮೆಟ್ಟಿಲೇರಿದ್ದರು.
ಪ್ರಕರಣ ಸಂಬಂಧ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದ್ದೇ ಆದರೆ, ದೇಶ ಬಿಟ್ಟು ಹೋಗುವ ಸಾಧ್ಯತೆಗಳಿದ್ದು, ಹೀಗಾಗಿ ಜಾಮೀನು ನೀಡದಂತೆ ನ್ಯಾಯಾಲಯಕ್ಕೆ ದೆಹಲಿ ಪೊಲೀಸರು ತಿಳಿಸಿದ್ದರು. ಈ ಹಿನ್ನಲೆಯಲ್ಲಿ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಅರವಿಂದ ಕುಮಾರ್ ಅವರು ನಿರೀಕ್ಷಣಾ ಜಾಮೀನು ಕುರಿತ ಆದೇಶವನ್ನು ನಾಳೆಯವರೆಗೂ ಕಾಯ್ದಿರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Sunanda Pushkarಸುನಂದಾ ಪುಷ್ಕರ್Shashi Tharoorಶಶಿ ತರೂರ್Delhi Courtದೆಹಲಿ ನ್ಯಾಯಾಲಯanticipatory bailನಿರೀಕ್ಷಣಾ ಜಾಮೀನು
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


