ದೇಶ

ಸುಪ್ರೀಂ ತೀರ್ಪಿನ ಬೆನ್ನಲ್ಲೇ ಅಧಿಕಾರ ಮರಳಿ ಪಡೆದ ದೆಹಲಿ ಸರ್ಕಾರ, ಅಧಿಕಾರಿಗಳ ವರ್ಗಾವಣೆ

ಸುಪ್ರೀಂ ಕೋರ್ಟ್ ತನ್ನ ಪರವಾಗಿ ತೀರ್ಪು ನೀಡಿದ ಕೆಲವೇ ಕ್ಷಣಗಳಲ್ಲಿ, ಲೆಫ್ಟಿನೆಂಟ್ ಗವರ್ನರ್ ರಿಂದ ಐಎಎಸ್ ಹಾಗೂ ಇತರೆ...

ಸುಪ್ರೀಂ ತೀರ್ಪಿನ ಬೆನ್ನಲ್ಲೇ ಅಧಿಕಾರ ಮರಳಿ ಪಡೆದ ದೆಹಲಿ ಸರ್ಕಾರ, ಅಧಿಕಾರಿಗಳ ವರ್ಗಾವಣೆ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
Published On :
ನವದೆಹಲಿ: ಸುಪ್ರೀಂ ಕೋರ್ಟ್ ತನ್ನ ಪರವಾಗಿ ತೀರ್ಪು ನೀಡಿದ ಕೆಲವೇ ಕ್ಷಣಗಳಲ್ಲಿ, ಲೆಫ್ಟಿನೆಂಟ್ ಗವರ್ನರ್ ರಿಂದ ಐಎಎಸ್ ಹಾಗೂ ಇತರೆ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮತ್ತು ಹುದ್ದೆಗೆ ನೇಮಕ ಮಾಡುವ ಅಧಿಕಾರ ಮರಳಿ ಪಡೆದಿರುವುದಾಗಿ ದೆಹಲಿ ಸರ್ಕಾರ ಹೇಳಿದೆ.
ಎರಡು ವರ್ಷಗಳ ಹಿಂದೆ, ದೆಹಲಿ ಹೈಕೋರ್ಟ್ ನಿರ್ಧಾರದಂತೆ  ಚುನಾಯಿತ ಸರ್ಕಾರದಿಂದ ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆ ಅಧಿಕಾರ ಕಿತ್ತುಕೊಳ್ಳಲಾಗಿತ್ತು. ಈಗ ಆ ಅಧಿಕಾರವನ್ನು ಮರಳಿ ಪಡೆಯಲಾಗಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರು ಹೇಳಿದ್ದಾರೆ.
ಒಬ್ಬ ಸಚಿವನಾಗಿ ಈ ವ್ಯವಸ್ಥೆ ಬದಲಾವಣೆಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನಾನು ಆದೇಶಿಸಿದ್ದೇನೆ ಎಂದು ಸಿಸೋಡಿಯಾ ವರದಿಗಾರರಿಗೆ ತಿಳಿಸಿದ್ದಾರೆ.
ರಾಜ್ಯ ಸರ್ಕಾರದೊಂದಿಗೆ ಲೆಫ್ಟಿನೆಂಟ್ ಗವರ್ನರ್ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು ಎಂದು ಹೇಳುವ ಮೂಲಕ ಸುಪ್ರೀಂ ಕೋರ್ಟ್ ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ನಡುವಿನ ಅಧಿಕಾರ ಜಟಾಪಟಿಗೆ ಇಂದು ತೆರೆ ಎಳೆದಿದೆ.
ಸಂವಿಧಾನಾತ್ಮಕ ಅವಕಾಶವಿರದ ಹೊರತು ಲೆಫ್ಟಿನೆಂಟ್ ಗವರ್ನರ್ ಸ್ವತಂತ್ರವಾಗಿ ಅಧಿಕಾರ ನಡೆಸುವಂತಿಲ್ಲ ಮತ್ತು ಚುನಾಯಿತ ಸರ್ಕಾರದ ಪ್ರತಿರೋಧಿಯಾಗಿ ನಡೆದುಕೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
2016ರಲ್ಲಿ ಲೆಫ್ಟಿನೆಂಟ್ ಗವರ್ನರ್ ದೆಹಲಿ ಆಡಳಿತದ ಸೂತ್ರ ಹಿಡಿದಿರುತ್ತಾರೆ ಎಂದು ದೆಹಲಿ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.