ಪ್ರಾಮಾಣಿಕ ಆಡಳಿತದ ಮೂಲಕ ಕಾಶ್ಮೀರದಲ್ಲಿ ಶಾಂತಿ, ಸ್ಥಿರತೆ: ರಾಜನಾಥ್ ಸಿಂಗ್
ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾದ ನಂತರ ಮೊದಲ ಬಾರಿಗೆ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ ಕೇಂದ್ರ ಗೃಹ...

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾದ ನಂತರ ಮೊದಲ ಬಾರಿಗೆ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು, ಪ್ರಾಮಾಣಿಕ, ಪರಿಣಾಮಕಾರಿ ಮತ್ತು ದಕ್ಷ ಆಡಳಿತದ ಮೂಲಕ ಕಾಶ್ಮೀರದಲ್ಲಿ ಶಾಂತಿ ಮತ್ತು ಸ್ಥಿರತೆ ತರುವುದಾಗಿ ಗುರುವಾರ ಹೇಳಿದ್ದಾರೆ.
ಕಾಶ್ಮೀರ ರಾಜ್ಯಪಾಲ ಎನ್ಎನ್ ವೊಹ್ರಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದ ಉನ್ನತ ಮಟ್ಟದ್ದ ಭದ್ರತಾ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜನಾಥ್ ಸಿಂಗ್, ರಾಜ್ಯದಲ್ಲಿ ಶಾಂತಿ ಸ್ಥಾಪಿಸಿದ ನಂತರವೇ ಕಾಶ್ಮೀರಿ ಜನತೆಗೆ ಅಭಿವೃದ್ಧಿಯ ಕನಸು ನನಸಾಗಲಿದೆ ಎಂದರು.
ಕಾಶ್ಮೀರದಲ್ಲಿ ಶಾಂತಿ ಸ್ಥಾಪಿಸಲು ಮತ್ತು ಆಡಳಿತದಲ್ಲಿ ಪಾರದರ್ಶಕತೆ ತರಲು ಕೇಂದ್ರ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲು ಬದ್ಧವಾಗಿದೆ ಎಂದರು.
ಬಿಜೆಪಿ, ಪಿಡಿಪಿಗೆ ನೀಡಿದ್ದ ಬೆಂಬಲ ಹಿಂಪಡೆದ ಹಿನ್ನೆಲೆಯಲ್ಲಿ ಮೆಹಬೂಬ ಮುಫ್ತಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ನಂತರ ಜೂನ್ 20ರಂದು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


