ದೇಶ

ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕ್ರೈಸ್ತರ ಪಾತ್ರ ಇಲ್ಲ: ಬಿಜೆಪಿ ಸಂಸದನ ಹೇಳಿಕೆ

ಮುಂಬೈನ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದು, ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕ್ರೈಸ್ತರ ಪಾತ್ರ ಇಲ್ಲ ಎಂದು ಹೇಳಿದ್ದಾರೆ.

ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕ್ರೈಸ್ತರ ಪಾತ್ರ ಇಲ್ಲ: ಬಿಜೆಪಿ ಸಂಸದನ ಹೇಳಿಕೆ
ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕ್ರೈಸ್ತರ ಪಾತ್ರ ಇಲ್ಲ: ಬಿಜೆಪಿ ಸಂಸದನ ವಿವಾದಾತ್ಮಕ ಹೇಳಿಕೆ
Published On :
ಮುಂಬೈ: ಮುಂಬೈನ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದು, ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕ್ರೈಸ್ತರ ಪಾತ್ರ ಇಲ್ಲ ಎಂದು ಹೇಳಿದ್ದಾರೆ. 
ಕ್ರೈಸ್ತರು ಬ್ರಿಟನ್ ಮೂಲವನ್ನು ಹೊಂದಿದ್ದಾರೆ. ಆದ್ದರಿಂದ ಅವರು ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗಿಯಾಗಿರಲಿಲ್ಲ. ಭಾರತ ಹಿಂದೂಗಳಿಂದಾಗಲೀ ಅಥವಾ ಮುಸ್ಲಿಮರಿಂದಾಗಲಿ ಸ್ವಾತಂತ್ರ್ಯ ಪಡೆಯಲಿಲ್ಲ. ನಾವು ಹಿಂದೂಸ್ಥಾನಿಗಳಾಗಿ ಹೋರಾಟ ಮಾಡಿದ್ದಕ್ಕಾಗಿ ಸ್ವಾತಂತ್ರ್ಯ ದೊರೆಯಿತು ಎಂದು ಗೋಪಾಲ್ ಶೆಟ್ಟಿ ಹೇಳಿದ್ದಾರೆ. 
ಕಬ್ರಸ್ತಾನ್ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಗೋಪಾಲ್ ಶೆಟ್ಟಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗೋಪಾಲ್ ಶೆಟ್ಟಿ ಹೇಳಿಕೆಯನ್ನು ಖಂಡಿಸಿರುವ ಕಾಂಗ್ರೆಸ್ ಬಿಜೆಪಿಗೆ ಇತಿಹಾಸ ಗೊತ್ತಿಲ್ಲ. ಬಿಜೆಪಿ ಸಂಸದನಿಗೂ ಇತಿಹಾಸ ಗೊತ್ತಿಲ್ಲ. ಅಥವಾ ಕೋಮುಸೌಹಾರ್ದತೆಯನ್ನು ಹಾಳುಮಾಡುವುದಕ್ಕೆ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದೆ. 
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸದೇ ಇದ್ದದ್ದು ಕ್ರೈಸ್ತರೋ ಅಥವಾ ಮುಸ್ಲಿಮರೋ ಅಲ್ಲ, ಬದಲಾಗಿ ಆರ್ ಎಸ್ ಎಸ್ ಹಾಗೂ ಹಿಂದೂ ಮಹಾಸಭಾ ಸ್ವಾತಂತ್ರ್ಯ ಸಂಗ್ರಾಮದಲ್ಲಿ  ಭಾಗವಹಿಸಿರಲಿಲ್ಲ.  ಇದು ಬಿಜೆಪಿಯ ಇತಿಹಾಸ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಆಕ್ರೋಶ ಹೊರಹಾಕಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.