ಭೀಕರ ಅಪಘಾತ; ಸಾವಿನ ಮನೆಯಿಂದ ವಾಪಸ್ಸಾಗುತ್ತಿದ್ದ ಆರು ಮಂದಿ ಮಸಣಕ್ಕೆ, ದುರಂತ!
ಸಾವಿನ ಮನೆಯಿಂದ ವಾಪಸ್ಸಾಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಹರಿಯಾಣದಲ್ಲಿ ನಡೆದಿದೆ.

Published On :
ಯಮುನಾನಗರ: ಸಾವಿನ ಮನೆಯಿಂದ ವಾಪಸ್ಸಾಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಹರಿಯಾಣದಲ್ಲಿ ನಡೆದಿದೆ.
ತೈಲ ಟ್ಯಾಂಕರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ರಸಲ್ಪುರ್ ನಿವಾಸಿಯಾದ ಸುರೇಂದ್ರ ಎಂಬುವರು ತಮ್ಮ ಕುಟುಂಬದೊಂದಿಗೆ ಯಮುನಾನಗರಕ್ಕೆ ಅಂತ್ಯಕ್ರಿಯೆಗೆ ತೆರಳಿದ್ದು ಅಂತ್ಯಕ್ರಿಯೆ ಮುಗಿಸಿ ವಾಪಸ್ಸಾಗುತ್ತಿದ್ದಾಗ ವೇಗವಾಗಿ ಬಂದ ಟ್ಯಾಂಕರ್ ಕಾರಿಗೆ ಗುದ್ದಿದೆ. ಈ ಅಪಘಾತದಲ್ಲಿ ಸ್ಥಳದಲ್ಲೇ ಆರು ಮಂದಿ ದುರ್ಮರಣ ಹೊಂದಿದ್ದಾರೆ.
ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಬಿಸ್ಲಪುರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಅಪಘಾತದ ಬಳಿಕ ಟ್ಯಾಂಕರ್ ಚಾಲಕ ಲಾರಿಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜು-ಗುಜ್ಜಾಗಿದ್ದು ಶವಗಳನ್ನು ಹೊರತೆಗೆಯಲು ಕಾರಿನ ಹೊರಭಾಗವನ್ನು ಸಂಪೂರ್ಣವಾಗಿ ಕತ್ತರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


