ದೇಶ

ಬೆಂಗಳೂರು ಐಐಎಸ್ಸಿ, ಮಣಿಪಾಲ ಅಕಾಡೆಮಿ ಸೇರಿ 6 ಸಂಸ್ಥೆಗಳಿಗೆ ಉತ್ಕೃಷ್ಟ ಸ್ಥಾನಮಾನ

ಬೆಂಗಳೂರಿನ ಪ್ರತಿಷ್ಠಿತ ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್ಸಿ) ಹಾಗೂ ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ...

ಬೆಂಗಳೂರು ಐಐಎಸ್ಸಿ, ಮಣಿಪಾಲ ಅಕಾಡೆಮಿ ಸೇರಿ 6 ಸಂಸ್ಥೆಗಳಿಗೆ ಉತ್ಕೃಷ್ಟ ಸ್ಥಾನಮಾನ
ಐಐಎಸ್ಸಿ ಬೆಂಗಳೂರು
Published On :
ನವದೆಹಲಿ: ಬೆಂಗಳೂರಿನ ಪ್ರತಿಷ್ಠಿತ ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್ಸಿ) ಹಾಗೂ ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ ಸೇರಿದಂತೆ ದೇಶದ ಆರು ಶಿಕ್ಷಣ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ 'ಉತ್ಕೃಷ್ಟ ಸಂಸ್ಥೆ ಸ್ಥಾನಮಾನ' ನೀಡಿದೆ. ಆರರಲ್ಲಿ ಮೂರು ಸರ್ಕಾರಿ ಮತ್ತು ಮೂರು ಖಾಸಗಿ ಸಂಸ್ಥೆಗಳಾಗಿವೆ.
ಐಐಟಿ ಮುಂಬೈ, ಐಐಟಿ ದೆಹಲಿ, ಐಐಎಸ್ಸಿ ಬೆಂಗಳೂರು, ಮಣಿಪಾಲ ಉನ್ನತ ಶಿಕ್ಷಣ ಸಂಸ್ಥೆ, 
ಬಿಟ್ಸ್‌ , ಪಿಳ್ಳಾನಿ, ರಾಜಸ್ಥಾನ, ಹಾಗೂ ಜಿಯೊ ಇನ್ ಸ್ಟಿಟ್ಯೂಟ್‌ ಸಂಸ್ಥೆಗಳು ಉತ್ಕೃಷ್ಟ ಸಂಸ್ಥೆ ಸ್ಥಾನಮಾನ ಪಡೆದಿದ್ದು, ಈ ಸಂಸ್ಥೆಗಳು ಮುಂದಿನ ಐದು ವರ್ಷಗಳಲ್ಲಿ ಸರ್ಕಾರದಿಂದ 1 ಸಾವಿರ ಕೋಟಿ ರುಪಾಯಿ ಅನುದಾನ ಪಡೆಯಲಿವೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಅವರು ಟ್ವೀಟ್ ಮಾಡಿದ್ದಾರೆ.
ಜಾಗತಿಕ ಮಟ್ಟದಲ್ಲಿ ಭಾರತದ ಶಿಕ್ಷಣ ಸಂಸ್ಥೆಗಳ ರ‍್ಯಾಂಕಿಂಗ್‌ ಹೆಚ್ಚಿಸುವ ಉದ್ದೇಶದಿಂದ, ವಿಶ್ವ ದರ್ಜೆಯ ವಿವಿಗಳನ್ನು ಸೃಷ್ಟಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಈ ಸ್ಥಾನಮಾನದಿಂದ ಅವುಗಳಿಗೆ ಸಂಪೂರ್ಣ ಸ್ವಾಯತ್ತತೆ ದೊರೆಯಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಭಾರತದಲ್ಲಿ 800ಕ್ಕಿಂತಲೂ ಹೆಚ್ಚು ವಿಶ್ವವಿದ್ಯಾಲಯಗಳಿವೆ. ಆದರೆ, ಟಾಪ್‌ 100 ಅಥವಾ 200ರೊಳಗೆ ವಿಶ್ವ ರ‍್ಯಾಂಕಿಂಗ್‌ ಪಡೆಯುವ ಸಾಮರ್ಥ್ಯ‌ದ ಒಂದೇ ಒಂದು ವಿವಿ ಇಲ್ಲ. ಸ್ಥಾನಮಾನ ನೀಡುವ ಕ್ರಮದಿಂದ ಇದನ್ನು ಸಾಧಿಸಲು ಸಾಧ್ಯವಾಗಬಹುದೆಂಬ ವಿಶ್ವಾಸವಿದೆ. ರ‍್ಯಾಂಕಿಂಗ್‌ ಹೆಚ್ಚಳಕ್ಕೆ ಸೂಕ್ತ ಯೋಜನೆ, ಸಂಪೂರ್ಣ ಸ್ವಾಯತ್ತೆ ಮತ್ತು ಸಾರ್ವಜನಿಕ ಸಂಸ್ಥೆಗಳಿಗೆ ಸರ್ಕಾರದ ನೆರವು ಸಿಗಲಿದೆ ಎಂದು ಪ್ರಕಾಶ್‌ ಜಾವಡೇಕರ್‌ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.