ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರಗಳಲ್ಲಿ ಭಾರತ-ದಕ್ಷಿಣ ಕೊರಿಯಾ ಒಪ್ಪಂದಕ್ಕೆ ಸಹಿ
ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೇ-ಇನ್ ಅವರನ್ನು ಭೇಟಿ ಮಾಡಿದ ವಿದೇಶಾಂಗ ವ್ಯವಹಾರಗಳ ...

ನವದೆಹಲಿ: ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೇ-ಇನ್ ಅವರನ್ನು ಭೇಟಿ ಮಾಡಿದ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವೆ ಸುಷ್ಮಾ ಸ್ವರಾಜ್ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು.
ಭಾರತಕ್ಕೆ ಮೂರು ದಿನಗಳ ಭೇಟಿಗಾಗಿ ತಮ್ಮ ಪತ್ನಿ ಕಿಮ್ ಜುಂಗ್-ಸೂಕ್ ಜೊತೆ ಆಗಮಿಸಿರುವ ದಕ್ಷಿಣ ಕೊರಿಯೊ ಅಧ್ಯಕ್ಷ ಮೂನ್ ಜೇ ಇನ್ ಅವರನ್ನು ನಿನ್ನೆ ಸಂಜೆ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಜನರಲ್ (ನಿವೃತ್ತ) ವಿಕೆ ಸಿಂಗ್ ಸ್ವಾಗತಿಸಿದರು.
ಅಧ್ಯಕ್ಷ ಮೂನ್ ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಗಾಂಧಿ ಸ್ಮೃತಿ ಅವರನ್ನು ಭೇಟಿ ಮಾಡಲಿದ್ದಾರೆ. ನೊಯ್ಡಾದಲ್ಲಿ ಅವರು ಸ್ಯಾಮ್ ಸಂಗ್ ಘಟಕಕ್ಕೆ ಭೇಟಿ ನೀಡಲಿದ್ದಾರೆ.
ನಂತರ ಅವರು ಭಾರತ-ದಕ್ಷಿಣ ಕೊರಿಯಾ ವ್ಯಾಪಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ನಾಳೆ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಭವ್ಯ ಸ್ವಾಗತ ಕೋರಲಾಗುವುದು. ಇಂದು ಕೇಂದ್ರ ವಾಣಿಜ್ಯ ಖಾತೆ ಸಚಿವ ಸುರೇಶ್ ಪ್ರಭು ಮತ್ತು ದಕ್ಷಿಣ ಕೊರಿಯಾ ವಾಣಿಜ್ಯ ಖಾತೆ ಸಚಿವ ಕಿಮ್ ಹ್ಯುನ್-ಚೊಂಗ್ ಹಲವು ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರಗಳಿಗೆ ಸಂಬಂಧಪಟ್ಟ ಒಪ್ಪಂದಗಳಿಗೆ ಸಹಿ ಹಾಕಿದರು.
ದ್ವಿಪಕ್ಷೀಯ ಸಂಬಂಧದಲ್ಲಿ ವಾಣಿಜ್ಯ ಮತ್ತು ವ್ಯಾಪಾರ ಕ್ಷೇತ್ರಗಳು ಮುಖ್ಯವಾಗುತ್ತವೆ. ಈ ಸಂಬಂಧವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ನಾವು ಸಿದ್ದರಾಗಿದ್ದೇವೆ. ಮಾತುಕತೆ ಅತ್ಯಂತ ಫಲಪ್ರದವಾಗಿತ್ತು ಎಂದು ಸುರೇಶ್ ಪ್ರಭು ಮಾಧ್ಯಮ ಪ್ರತಿನಿಧಿಗಳಿಗೆ ಉತ್ತರಿಸಿದ್ದಾರೆ.
ಮೇಕ್ ಇನ್ ಇಂಡಿಯಾ ಕಾರ್ಯಕ್ರಮದ ಭಾಗವಾಗಿ ನಾಯಕರುಗಳು ನೊಯ್ಡಾದಲ್ಲಿ ಸ್ಯಾಮ್ ಸಂಗ್ ಘಟಕಕ್ಕೆ ಭೇಟಿ ನೀಡಲಿದ್ದಾರೆ. ಇಲ್ಲಿ 2020ರ ವೇಳೆಗೆ ಪ್ರತಿ ತಿಂಗಳು 10 ದಶಲಕ್ಷ ಮೊಬೈಲ್ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


