ಜಮ್ಮು-ಕಾಶ್ಮೀರ: ಕುಪ್ವಾರ ಎನ್'ಕೌಂಟರ್; ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸಿದೆ...

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸಿದೆ ಎಂದು ಸೋಮವಾರ ತಿಳಿದುಬಂದಿದೆ.
ಕುಪ್ವಾರ ಜಿಲ್ಲೆಯ ಹಂದ್ವಾರದ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿಗಳು ಲಭ್ಯವಾಗುತ್ತಿದ್ದಂತೆಯೇ ಸೇನಾ ಪಡೆಗಳು ಕಳೆದ ರಾತ್ರಿಯಿಂದಲೂ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು.
ಇದರಂತೆ ಇಂದು ಬೆಳಿಗ್ಗೆ ಓರ್ವ ಉಗ್ರನನ್ನು ಹತ್ಯೆ ಮಾಡಿದೆ. ಪ್ರಸ್ತುತ ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಉಗ್ರರುಜಮ್ಮು ಮತ್ತು ಕಾಶ್ಮೀರJammu and Kashmirsecurity forcesencounterterroristKupwaraಕುಪ್ವಾರಭದ್ರತಾ ಪಡೆಗಳುಎನ್\'ಕೌಂಟರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


