ದೇಶ

ಕಾಶ್ಮೀರದಲ್ಲಿ ನಿಲ್ಲದ ಅಟ್ಟಹಾಸ; ಮನೆಗೆ ನುಗ್ಗಿ ಮಹಿಳೆಯ ಕತ್ತು ಸೀಳಿದ ಉಗ್ರರು

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮರೆದಿದ್ದು, ಮನೆಯೊಂದಕ್ಕೆ ನುಗ್ಗಿರುವ ಉಗ್ರರು ಮಹಿಳೆಯೊಬ್ಬರ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಭಾನುವಾರ ನಡೆದಿದೆ...

ಕಾಶ್ಮೀರದಲ್ಲಿ ನಿಲ್ಲದ ಅಟ್ಟಹಾಸ; ಮನೆಗೆ ನುಗ್ಗಿ ಮಹಿಳೆಯ ಕತ್ತು ಸೀಳಿದ ಉಗ್ರರು
ಕಾಶ್ಮೀರದಲ್ಲಿ ನಿಲ್ಲದ ಅಟ್ಟಹಾಸ; ಮನೆಗೆ ನುಗ್ಗಿ ಮಹಿಳೆಯ ಕತ್ತು ಸೀಳಿದ ಉಗ್ರರು
Published On :
ಶ್ರೀನಗರ; ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮರೆದಿದ್ದು, ಮನೆಯೊಂದಕ್ಕೆ ನುಗ್ಗಿರುವ ಉಗ್ರರು ಮಹಿಳೆಯೊಬ್ಬರ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಭಾನುವಾರ ನಡೆದಿದೆ. 
ಬಂಡಿಪೋರ ಜಿಲ್ಲೆಯ ಹಜನ್ ಶಹಗುಂಡ್ ಗ್ರಾಮದಲ್ಲಿ ಘಟನೆ ನಡೆಸಿದ್ದು, ಅಬ್ದುಲ್ ಮಜೀದ್ ದಾರ್ ಎಂಬುವವರ ಪತ್ನಿಯನ್ನು ಉಗ್ರರು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.
ಹತ್ಯೆಯಾಗಿರುವ ಮಹಿಳೆಯ ಪತಿ ಅಬ್ದುಲ್ ಮಜೀದ್ ದಾರ್ ಪಿಡಿಪಿ ಕಾರ್ಯಕರ್ತರಾಗಿದ್ದಾರೆಂದು ಹೇಳಲಾಗುತ್ತಿದೆ. 
ನಿನ್ನೆ ಮಧ್ಯಾಹ್ನ ಮನೆಗೆ ನುಗ್ಗಿರುವ ಇಬ್ಬರು ಉಗ್ರರು, ಮಜೀದ್ ದಾರ್ ಅವರ ಪತ್ನಿ ಶಕೀಲಾ ಬೇಗಂ ಅವರ ಕತ್ತು ಸೀಳಿ ಹತ್ಯೆ ಮಾಡಿದ್ದಾರೆಂದು ವರದಿಗಳು ತಿಳಿಸಿವೆ. 
ರಕ್ತದ ಮಡುವಿನಲ್ಲಿ ಬಿದ್ದಿದ್ದ ಶಕೀಲಾ ಅವರನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.