ಸತತ 5ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರುತ್ತಿದ್ದು, ಸತತ ಐದನೇ ದಿನ ಪ್ರತೀ ಲೀಟರ್ ತೈಲ ಬೆಲೆಯಲ್ಲಿ ಏರಿಕೆಯಾಗಿದೆ...

Published On :
ನವದೆಹಲಿ; ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರುತ್ತಿದ್ದು, ಸತತ ಐದನೇ ದಿನ ಪ್ರತೀ ಲೀಟರ್ ತೈಲ ಬೆಲೆಯಲ್ಲಿ ಏರಿಕೆಯಾಗಿದೆ.
ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ರೂ.76.36 ಇದ್ದು, ಮುಂಬೈ, ಚೆನ್ನೈ ಮತ್ತು ಕೋಲ್ಕತಾದಲ್ಲಿ ಕ್ರಮವಾಗಿ ರೂ. 83.75, ರೂ. 79.25, ರೂ. 79.03 ಆಗಿದೆ.
ಇದರಂತೆ ಡೀಸೆಲ್ ದರ ಕೂಡ ಏರಿಕೆಯಾಗಿದ್ದು, ದೆಹಲಿಯಲ್ಲಿ ಇಂದಿನ ಡೀಸೆಲ್ ಬೆಲೆ ರೂ. 68.07 ಆಗಿದೆ. ಮುಂಬೈನಲ್ಲಿ ರೂ. 72.23, ಕೋಲ್ಕತಾದಲ್ಲಿ ರೂ. 70.62, ಚೆನ್ನೈನಲ್ಲಿ ರೂ.71.85 ಆಗಿದೆ.
ಇನ್ನು ಬೆಂಗಳೂರಿನಲ್ಲಿಯೂ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಹೆಚ್ಚಳವಾಗಿದ್ದು, ಪ್ರತಿ ಲೀಟರ್ ಪೆಟ್ರೋಲ್ ಬೆಗೆ 15 ಪೈಸೆ ಏರಿಕೆಯಾಗಿದೆ. ಬೆಲೆ ಏರಿಕೆಯಿಂದಾಗಿ ಇಂದಿನ ಪೆಟ್ರೋಲ್ ದರ ರೂ.77.36 ಆಗಿದ್ದು, ಡೀಸೆಲ್ ದರ ರೂ.68.84 ಆಗಿದೆ. ನೂತನ ದರಗಳು ಇಂದು ಬೆಳಿಗ್ಗೆ 6 ಗಂಟೆಯಿಂದಲೇ ಜಾರಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


