ನೋಯ್ಡಾ: ಪ್ರಧಾನಿ ಮೋದಿ, ದಕ್ಷಿಣ ಕೊರಿಯಾ ಅಧ್ಯಕ್ಷರಿಂದ ಸ್ಯಾಮ್'ಸಂಗ್ ಮೊಬೈಲ್ ಉತ್ಪಾದನಾ ಘಟಕ ಉದ್ಘಾಟನೆ
ನೋಯ್ಡಾದಲ್ಲಿನ ವಿಶ್ವದ ಅತಿ ದೊಡ್ಡ ಮೊಬೈಲ್ ಫ್ಯಾಕ್ಟರಿಯನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ದಕ್ಷಿಣ ಕೊರಿಯಾದ ಅಧ್ಯಕ್ಷ ಮೂನ್-ಜೆ-ಇನ್ ಜಂಟಿಯಾಗಿ ಉದ್ಘಾಟಿಸಿದ್ದಾರೆ.

Published On :
ನೋಯ್ಡಾ: ನೋಯ್ಡಾದಲ್ಲಿನ ವಿಶ್ವದ ಅತಿ ದೊಡ್ಡ ಮೊಬೈಲ್ ಫ್ಯಾಕ್ಟರಿಯನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ದಕ್ಷಿಣ ಕೊರಿಯಾದ ಅಧ್ಯಕ್ಷ ಮೂನ್-ಜೆ-ಇನ್ ಜಂಟಿಯಾಗಿ ಉದ್ಘಾಟಿಸಿದ್ದಾರೆ.
ಸುಮಾರು 35 ಎಕರೆಯ ಪ್ರದೇಶದಲ್ಲಿ ನಿರ್ಮಾಣವಾಗಿರುವ ಸ್ಯಾಮ್ ಸಂಗ್ ಎಲೆಕ್ಟ್ರಾನಿಕ್ಸ್, ಮೊಬೈಲ್ ಫ್ಯಾಕ್ಟರಿ ವಿಶ್ವದ ಅತಿ ದೊಡ್ಡ ಮೊಬೈಲ್ ಫ್ಯಾಕ್ಟರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, 2020 ರ ವೇಳೆಗೆ ಪ್ರತಿ ತಿಂಗಳಿಗೆ 10 ಮಿಲಿಯನ್ ಯುನಿಟ್ ಗಳಷ್ಟು ಮೊಬೈಲ್ ಗಳು ಈ ಉತ್ಪಾದನಾ ಘಟಕದಲ್ಲಿ ಉತ್ಪಾದನೆಯಾಗಲಿವೆ.
ನೋಯ್ಡಾದಲ್ಲಿ ಉದ್ಘಾಟನೆಯಾಗಿರುವ ಮೊಬೈಲ್ ಉತ್ಪಾದನಾ ಘಟಕ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಮೇಕ್ ಇನ್ ಇಂಡಿಯಾ ಯೋಜನೆಯನ್ನು ಮತ್ತಷ್ಟು ಬಲಿಷ್ಠಗೊಳಿಸಲಿದೆ. ನೋಯ್ಡಾದ ಸೆಕ್ಟರ್ 81 ರಲ್ಲಿ 1990 ರಲ್ಲಿ ಸ್ಯಾಮ್ ಸಂಗ್ ಎಲೆಕ್ಟ್ರಾನಿಕ್ಸ್ ಉಪಕರಣಗಳ ಉತ್ಪಾದನಾ ಘಟಕವನ್ನು ಪ್ರಾರಂಭಿಸಲಾಗಿತ್ತು ಈ ಬಳಿಕ 1997 ರಲ್ಲಿ ಸ್ಯಾಮ್ ಸಂಗ್ ಟಿವಿ ಉತ್ಪಾದನೆಯನ್ನೂ ಪ್ರಾರಂಭಿಸಲಾಯಿತು. ಈಗಿರುವ ಮೊಬೈಲ್ ಉತ್ಪಾದನಾ ಘಟಕವನ್ನು 2005 ರಲ್ಲಿ ಪ್ರಾರಂಭಿಲಾಗಿದ್ದು, ಮತ್ತಷ್ಟು ಅಭಿವೃದ್ಧಿಗೊಳಿಸಲಾಗಿದೆ. ಕಳೆದ ವರ್ಷ ಸ್ಯಾಮ್ ಸಂಗ್ ಸಂಸ್ಥೆ ನೋಯ್ಡಾದ ಉತ್ಪಾದನಾ ಘಟಕದಲ್ಲಿ 4,915 ಕೋಟಿ ರೂಪಾಯಿ ಹೂಡಿಕೆ ಮಾಡಿ ಉತ್ಪಾದನೆಯನ್ನು ದ್ವಿಗುಣಗೊಳಿಸಲು ತೀರ್ಮಾನಿಸಿತ್ತು, ಅದಂತೆಯೇ ಈಗ ಹೊಸ ಉತ್ಪಾದನಾ ಘಟಕವನ್ನೂ ಪ್ರಾರಂಭಿಸಲಾಗಿದ್ದು ವಿಶ್ವದ ಅತಿ ದೊಡ್ಡ ಮೊಬೈಲ್ ಉತ್ಪಾದನಾ ಘಟಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿNoidaನೋಯ್ಡಾSouth Korean PresidentLargest mobile factoryಅತಿ ದೊಡ್ಡ ಮೊಬೈಲ್ ಉತ್ಪಾದನಾ ಘಟಕದ.ಕೊರಿಯಾ ಅಧ್ಯಕ್ಷ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


