ಹಾಸಿನಿ ಅತ್ಯಾಚಾರ, ಹತ್ಯೆ ಪ್ರಕರಣ: ಆರೋಪಿ ಟೆಕ್ಕಿ ಗಲ್ಲು ಶಿಕ್ಷೆ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್
ಕಳೆದ ವರ್ಷ ಏಳು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಹತ್ಯೆ ಮಾಡಿದ್ದ 23 ವರ್ಷದ ಟೆಕ್ಕಿಯ ಗಲ್ಲು ಶಿಕ್ಷೆಯನ್ನು...

Published On :
ಚೆನ್ನೈ: ಕಳೆದ ವರ್ಷ ಏಳು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಹತ್ಯೆ ಮಾಡಿದ್ದ 23 ವರ್ಷದ ಟೆಕ್ಕಿಯ ಗಲ್ಲು ಶಿಕ್ಷೆಯನ್ನು ಮಂಗಳವಾರ ಮದ್ರಾಸ್ ಹೈಕೋರ್ಟ್ ಎತ್ತಿ ಹಿಡಿದಿದೆ.
ಕಳೆದ ವರ್ಷ ಫೆಬ್ರವರಿ 19ರಂದು ವಿಚಾರಣಾ ಕೋರ್ಟ್ ನೀಡಿದ್ದ ಗಲ್ಲು ಶಿಕ್ಷೆ ಪ್ರಶ್ನಿಸಿ ಆರೋಪಿ ಟೆಕ್ಕಿ ಎಸ್ ದಶವಂತ್ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಮೂರ್ತಿಗಳಾದ ಎಸ್ ವಿಮಲಾ ಮತ್ತು ರಾಮಾತಿಲಿಂಗಮ್ ಅವರನ್ನೊಳಗೊಂಡ ವಿಭಾಗೀಯ ಪೀಠ ವಜಾಗೊಳಿಸಿದೆ.
ಚೆನ್ನೈನಲ್ಲಿ ವಾಸವಿದ್ದ ಸಾಫ್ಟವೇರ್ ಇಂಜಿನಿಯರ್ ದಶವಂತ್ ತನ್ನದೇ ಅಪಾರ್ಟ್ಮೆಂಟ್ ನಲ್ಲಿದ್ದ ಹಾಸಿನಿ ಎಂಬ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ, ಯಾರಿಗೂ ತಿಳಿಯಬಾರದೆಂದು ಕೊಲೆ ಮಾಡಿ ನಂತರ ಸುಟ್ಟು ಹಾಕಿದ್ದ.
ಮೊದಲು ಏನೂ ತಿಳಿಯದಂತೆ ನಟಿಸಿದ್ದ ಆರೋಪಿಯನ್ನು ಬಾಲಕಿಯ ಶವ ದೊರೆತ ನಂತರ ಬಂಧಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
death sentenceಗಲ್ಲು ಶಿಕ್ಷೆಹತ್ಯೆ ಪ್ರಕರಣHasini rape and murder casetechie Dhasvanthಹಾಸಿನಿ ಅತ್ಯಾಚಾರಟೆಕ್ಕಿ ದಶವಂತ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


