ದೇಶ

ಮುಂಬೈ ಮಹಾಮಳೆ: ಸ್ಥಳೀಯ ರೈಲು ಸಂಚಾರ ಸ್ಥಗಿತ, ಕೆಲಸಕ್ಕೆ ರಜೆ ಹಾಕಿದ ಡಬ್ಬಾವಾಲಾಗಳು

ರಾತ್ರಿಯಿಡೀ ಸುರಿದ ಧಾರಾಕಾರ ಮಳಯಿಂದಾಗಿ ವಾಣಿಜ್ಯ ನಗರಿ ಮುಂಬೈಯಲ್ಲಿ ಪಶ್ಚಿಮ ರೈಲ್ವೆಯ ...

ಮುಂಬೈ ಮಹಾಮಳೆ: ಸ್ಥಳೀಯ ರೈಲು ಸಂಚಾರ ಸ್ಥಗಿತ, ಕೆಲಸಕ್ಕೆ ರಜೆ ಹಾಕಿದ ಡಬ್ಬಾವಾಲಾಗಳು
ಮುಂಬೈಯ ದಾದರ್ ರಸ್ತೆಯಲ್ಲಿ ನೀರು ತುಂಬಿದ ರಸ್ತೆಯಲ್ಲಿ ಮಾನವ ಪಿರಮಿಡ್ ರಚಿಸಿದ ಯುವಕರು
Published On :

ಮುಂಬೈ: ರಾತ್ರಿಯಿಡೀ ಸುರಿದ ಧಾರಾಕಾರ ಮಳಯಿಂದಾಗಿ ವಾಣಿಜ್ಯ ನಗರಿ ಮುಂಬೈಯಲ್ಲಿ ಪಶ್ಚಿಮ ರೈಲ್ವೆಯ ಉಪನಗರ ಸೇವೆ ಸ್ಥಗಿತಗೊಂಡಿದೆ.

ಚರ್ಚ್ ಗೇಟ್ ಮತ್ತು ಬೊರಿವಿಲಿ ನಡುವೆ ರೈಲ್ವೆ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಪಶ್ಚಿಮ ರೈಲ್ವೆ ವಲಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ರಾತ್ರಿಯಿಂದ ಮುಂಬೈ ನಗರ ಸುತ್ತಮುತ್ತ 200 ಮಿಲಿಮೀಟರ್ ಗೂ ಅಧಿಕ ಮಳೆ ಸುರಿದಿದ್ದು ರೈಲ್ವೆ ಹಳಿಗಳಲ್ಲಿ ನೀರು ನಿಂತುಕೊಂಡಿದೆ. ಪ್ರಯಾಣಿಕರ ಸುರಕ್ಷತೆ ಗಮನದಲ್ಲಿಟ್ಟುಕೊಂಡು ನೀರಿನ ಮಟ್ಟ ಕಡಿಮೆಯಾಗುವವರೆಗೆ ರೈಲ್ವೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೈಲ್ವೆ ಹಳಿಗಳಿಂದ ಪಂಪ್ ಮೂಲಕ ನೀರನ್ನು ಹೊರಹಾಕುವ ಪ್ರಯತ್ನ ನಡೆಯುತ್ತಿದೆ. ಆದರೂ ಕೇಂದ್ರ ರೈಲ್ವೆ ಉಪನಗರ ಸೇವೆಗಳು ಕಳೆದ ರಾತ್ರಿಯಿಂದ ಎಂದಿನಂತೆ ಸಂಚರಿಸುತ್ತಿವೆ.

ಕೇಂದ್ರ ರೈಲ್ವೆಯ ಎಲ್ಲಾ ಮೂರು ವಲಯಗಳಲ್ಲಿ ರೈಲುಗಳು ಎಂದಿನಂತೆ ಸಹಜವಾಗಿ ಸಂಚರಿಸುತ್ತಿವೆ ಎಂದು ಕೇಂದ್ರ ರೈಲ್ವೆ ವಲಯ ಟ್ವೀಟ್ ಮಾಡಿದೆ.

ಕಳೆದ ಮೂರು ದಿನಗಳಿಂದ ಸತತ ಮಳೆ ಸುರಿಯುತ್ತಿದ್ದರೂ ಕೂಡ ನಾವು ಅನಿಯಮಿತ ಸೇವೆ ಸಲ್ಲಿಸುತ್ತಿದ್ದೇವೆ. ರೈಲ್ವೆ ಸಂಚಾರದ ಬಗ್ಗೆ ಜನರಿಂದ ಹಲವು ಮೆಸೇಜ್ ಗಳು, ಟ್ವೀಟ್ ಗಳು ಬರುತ್ತಿವೆ. ಕೇಂದ್ರ ರೈಲ್ವೆ ವಲಯದ ಮೇಲೆ ಜನರು ಇಟ್ಟಿರುವ ನಂಬಿಕೆ, ವಿಶ್ವಾಸ, ಬೆಂಬಲದಿಂದ ನಾವು ಆಭಾರಿಯಾಗಿದ್ದೇವೆ ಎಂದು ಟ್ವೀಟ್ ಮಾಡಿದೆ.

ಭಾರತೀಯ ಹವಾಮಾನ ಇಲಾಖೆ, ಮುಂದಿನ ಗುರುವಾರದವರೆಗೆ ಭಾರೀ ಮಳೆಯಾಗಬಹುದೆಂದು ಅಂದಾಜಿಸಿದೆ. ಸತತ ಮಳೆಯ ಕಾರಣದಿಂದ ಮುಂಬೈ ನಗರಕ್ಕೆ ನೀರೊದಗಿಸುವ ತುಲ್ಸಿ ಕೆರೆ ನಿನ್ನೆಯಿಂದ ತುಂಬಿ ಹರಿಯುತ್ತಿದೆ. ಮುಂಬೈಯಲ್ಲಿ ಜನಪ್ರಿಯವಾಗಿರುವ ಡಬ್ಬಾವಾಲಾಗಳು, ಟಿಫನ್ ಕ್ಯಾರಿಯರ್  ಸೇವೆ ಸಲ್ಲಿಸುವವರು ಭಾರೀ ಮಳೆಗೆ ಹೊರಹೋಗಲು ಸಾಧ್ಯವಾಗದೆ ತಮ್ಮ ಕೆಲಸಕ್ಕೆ ವಿರಾಮ ಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.