ನೀಟ್ ನಲ್ಲಿ ತಮಿಳು ಮಾಧ್ಯಮ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್; ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಿಬಿಎಸ್ಇ ಅರ್ಜಿ
ನೀಟ್ ಪರೀಕ್ಷೆಯಲ್ಲಿ ತಮಿಳು ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡಬೇಕು ಎಂಬ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗುತ್ತದೆ ಎಂದು ಸಿಬಿಎಸ್ ಇ ಗುರುವಾರ ಹೇಳಿದೆ.

Published On :
ನವದೆಹಲಿ: ನೀಟ್ ಪರೀಕ್ಷೆಯಲ್ಲಿ ತಮಿಳು ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡಬೇಕು ಎಂಬ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗುತ್ತದೆ ಎಂದು ಸಿಬಿಎಸ್ ಇ ಗುರುವಾರ ಹೇಳಿದೆ.
ಈ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಮೂಲಗಳು ಮಾಹಿತಿ ನೀಡಿದ್ದು, ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಎಸ್ ಮೇಲ್ಮನವಿ ಅರ್ಜಿ ಸಲ್ಲಿಸಲಿದೆ ಎಂದು ತಿಳಿದುಬಂದಿದೆ.
ಕಳೆದ ಜುಲೈ 10ರಂದು ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆ (NEET)ಯನ್ನು ತಮಿಳು ಮಾಧ್ಯಮದಲ್ಲಿ ಬರೆದ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡುವಂತೆ ಸಿಬಿಎಸ್ ಇಗೆ ಮದ್ರಾಸ್ ಹೈಕೋರ್ಟ್ ಸೂಚಿಸಿತ್ತು. ಎಂಬಿಬಿಎಸ್ ಮತ್ತು ಬಿಡಿಎಸ್ ಪ್ರವೇಶ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ವ್ಯವಸ್ಥೆಯಲ್ಲಿ ವ್ಯತ್ಯಯಗೊಳ್ಳಲ್ಲಿದೆ. ಹೀಗಾಗಿ, ಎಂಬಿಬಿಎಸ್ ಪ್ರವೇಶ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ನ್ಯಾಯಾಲಯ ಆದೇಶಿಸಿತ್ತು. ಜತೆಗೆ ಹೊಸ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲು ಸಿಬಿಎಸ್‌ಇಗೆ ಎರಡು ವಾರಗಳ ಕಾಲಾವಕಾಶ ನೀಡಲಾಗಿತ್ತು.
ಇದೀಗ ಮದ್ರಾಸ್ ಹೈಕೋರ್ಟ್ ನ ಆದೇಶವನ್ನು ಪ್ರಶ್ನಿಸಿ ಸಿಬಿಎಸ್ ಇ ಅರ್ಜಿ ಸಲ್ಲಿಕೆ ಮಾಡಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNewdelhiMadras High Courtಮದ್ರಾಸ್ ಹೈಕೋರ್ಟ್CBSEಸಿಬಿಎಸ್ ಇNEETನೀಟ್Tamil medium studentsತಮಿಳು ಮಾಧ್ಯಮ ವಿದ್ಯಾರ್ಥಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


