'ವಿಶೇಷ ಸವಲತ್ತುಗಳಿಗೆ ಕತ್ತರಿ' ಎಚ್ಚರಿಕೆ ನೀಡಿದ್ದ ಇರಾನ್ ಈಗ ಭಾರತಕ್ಕೆ ತೈಲ ಪೂರೈಸುವುದಾಗಿ ಯು-ಟರ್ನ್!
ಅಮೆರಿಕ ಒತ್ತಡದ ಹಿನ್ನೆಲೆಯಲ್ಲಿ ಭಾರತ ಇರಾನ್ ನಿಂದ ಆಮದು ಮಾಡಿಕೊಳ್ಳಲಾಗುತ್ತಿದ್ದ ತೈಲ ಪ್ರಮಾಣವನ್ನು...

Published On :
ನವದೆಹಲಿ: ಅಮೆರಿಕ ಒತ್ತಡದ ಹಿನ್ನೆಲೆಯಲ್ಲಿ ಭಾರತ ಇರಾನ್ ನಿಂದ ಆಮದು ಮಾಡಿಕೊಳ್ಳಲಾಗುತ್ತಿದ್ದ ತೈಲ ಪ್ರಮಾಣವನ್ನು ತಗ್ಗಿಸಿದೆ, ಕಾರ್ಯತಂತ್ರದ ಪ್ರಮುಖ ಭಾಗವಾಗಿರುವ ಚಬಹಾರ್ ಬಂದರಿನಲ್ಲಿ ಹೂಡಿಕೆ ಮಾಡುವ ಭರವಸೆಯನ್ನೂ ಈಡೇರಿಸಿಲ್ಲ ಎಂದು ಇರಾನ್ ಭಾರತದ ಮೇಲೆ ಅಸಮಾಧಾನ ವ್ಯಕ್ತಪಡಿಸಿತ್ತು. ಅಷ್ಟೇ ಅಲ್ಲದೇ ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕುವ ಎಚ್ಚರಿಕೆಯನ್ನೂ ನೀಡಿತ್ತು. ಆದರೆ ಅಸಮಾಧಾನ ವ್ಯಕ್ತಪಡಿಸಿದ್ದ 24 ಗಂಟೆಗಳಲ್ಲೇ ಮೃದು ಧೋರಣೆ ತಳೆದಿದೆ.
ನವದೆಹಲಿಯನ್ನು ತನ್ನ ವಿಶ್ವಾಸಾರ್ಹ ಮಿತ್ರ ರಾಷ್ಟ್ರ ಎಂದು ಇರಾನ್ ಬಣ್ಣಿಸಿದ್ದು, ಅಸ್ಥಿರ ಇಂಧನ (ತೈಲ) ಮಾರುಕಟ್ಟೆಯೊಂದಿಗೆ ವ್ಯವಹರಿಸುವ ವಿಷಯದಲ್ಲಿ ಭಾರತ ಎದುರಿಸುತ್ತಿರುವ ಸವಾಲು, ಸಂಕಷ್ಟಗಳನ್ನು ಅರ್ಥಮಾಡಿಕೊಳ್ಳುವುದಾಗಿ ಹೇಳಿದೆ. ಅಷ್ಟೇ ಅಲ್ಲದೇ ಭಾರತಕ್ಕೆ ತೈಲ ಪೂರೈಕೆಯ ಭದ್ರತೆಯನ್ನು ಸಾಧ್ಯವಾದಷ್ಟೂ ಉತ್ತಮಗೊಳಿಸುವುದಾಗಿ ಹೇಳಿದೆ.
ಇರಾನ್ ನ ಉಪ ರಾಯಭಾರಿ ಮಸೂದ್ ರೆಜ್ವಾನಿಯನ್ ರಹಾಘಿ ಪ್ರಮುಖ ಭಾರತ-ಇರಾನ್ ನಡುವಿನ ಕಾರ್ಯತಂತ್ರದ ಭಾಗವಾಗಿರುವ ಚಬಹಾರ್ ಬಂದರಿಗೆ ಹೂಡಿಕೆ ಮಾಡುವ ಸಂಬಂಧ ಭಾರತ ನೀಡಿದ್ದ ಭರವಸೆಗಳು ಈ ವರೆಗೂ ಈಡೇರಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ, ಭಾರತಕ್ಕೆ ನೀಡಲಾಗುತ್ತಿರುವ ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕುವುದಾಗಿ ಎಚ್ಚರಿಕೆ ನೀಡಿದ್ದರು. ಈ ಬೆನ್ನಲ್ಲೇ ಇರಾನ್ ನ ರಾಯಬಹರಿ ಕಚೇರಿಯಿಂದ ಸ್ಪಷ್ಟನೆ ಬಂದಿದ್ದು, ಭಾರತದ ಸಂಕಷ್ಟ ನಮಗೆ ಅರ್ಥವಾಗುತ್ತದೆ. ತೈಲ ಪೂರೈಕೆಯ ವಿಶ್ವಾಸಾರ್ಹತೆಯನ್ನು ಹಾಗೂ ಭೂ-ರಾಜಕೀಯ ಸ್ಥಿತಿಗತಿಗಳನ್ನು ಗಮದಲ್ಲಿಟ್ಟುಕೊಂಡು ತೈಲ(ಇಂಧನ) ಪಾಲುದಾರರನ್ನು ಆಯ್ಕೆ ಮಾಡಿಕೊಳ್ಳುವುದು ಭಾರತಕ್ಕೆ ಬಿಟ್ಟ ವಿಚಾರ ಎಂದು ಇರಾನ್ ಸ್ಪಷ್ಟಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


